SBI ಭರ್ಜರಿ ನೇಮಕಾತಿ 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
813

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿಯಾಗಿ ನೇಮಕಾತಿ ನಡೆಸಿದ್ದು 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಏಪ್ರಿಲ್ 22,2019 ರೊಳಗೆ ಅರ್ಜಿ ಸಲ್ಲಿಸಬೇಕು.


Also read: ಬಿಎ, ಬಿ.ಎಡ್ ಮಾಡಿದ ಅಭ್ಯರ್ಥಿಗಳಿಗೆ HAL ನಲ್ಲಿ ಪಿಆರ್‌ಟಿ ಮತ್ತು ಟಿಜಿಟಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಪ್ರೊಬೆಷನರಿ ಆಫೀಸರ್
  • ಸಂಸ್ಥೆ (Organisation): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
  • ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಯಾವುದೇ ಪದವಿ ಮತ್ತು ಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ


Also read: ಬಿಇಎಲ್‌ ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ವಯೋಮಿತಿ: ಏಪ್ರಿಲ್ 1,2019 ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. SC/ST ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ ( SC/ST 15 ವರ್ಷ),(OBC ಅಭ್ಯರ್ಥಿಗಳಿಗೆ 13 ವರ್ಷ) ಮತ್ತು( ಸಾಮಾನ್ಯ /ಆರ್ಥಿಕವಾಗಿ ಹಿಂದುಳಿಗೆ ಅಭ್ಯರ್ಥಿಗಳಿಗೆ 10 ವರ್ಷ), ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದ ವರ್ಗ/ OBC ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಏಪ್ರಿಲ್ 22,2019 ರೊಳಗೆ ಪಾವತಿಸಬೇಕಿರುತ್ತದೆ.
  • ಹೆಚ್ಚಿನ ಮಾಹಿತಿಗಾಗಿ https://www.sbi.co.in/webfiles/uploads/files/careers/010419-Detailed-Eng-PO%202019.pdf ಕ್ಲಿಕ್ ಮಾಡಿ.