ಡಾ|| ಶಿವಕುಮಾರ್ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಬೇಕೆಂದು ಈಗ ಎಸ್.ಎಂ.ಕೃಷ್ಣ ಪ್ರಧಾನಿಗೆ ಮನವಿ ಮಾಡಿದ್ದಾರೆ; ಶೇಘ್ರದಲ್ಲೇ ಸ್ವಾಮಿಜಿಯವರಿಗೆ ಪ್ರಶಸ್ತಿ ಸಿಗ್ಗುತ್ತಾ?

0
1023

ಕರ್ನಾಟಕ ರತ್ನ ಡಾ|| ಶ್ರೀ.ಶಿವಕುಮಾರ ಸ್ವಾಮಿಜಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡುವಂತೆ ಹಿರಿಯ ರಾಜಕಾರಣಿ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ಈ ಹಿಂದೆ ಸ್ವಾಮೀಜಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಜಿಲ್ಲಾ ಶಿವಕುಮಾರ ಸ್ವಾಮೀಜಿ ಭಕ್ತ ವೃಂದ, ಅಖಿಲ ಭಾರತ ವೀರಶೈವ ಮಹಾ ಸಭಾದ ಜಿಲ್ಲಾ ಮತ್ತು ತಾಲ್ಲೂಕು ಘಟಕ ಒತ್ತಾಯಿಸಿತ್ತು.

ಸಿದ್ದಗಂಗಾ ಮಠದಲ್ಲಿ ಯಾವುದೇ ತಾರತಮ್ಯ ಮಾಡದೆ 10 ಸಾವಿರಕ್ಕೂ ಹೆಚ್ಚು ಬಡವಿದ್ಯಾರ್ಥಿಗಳಿಗೆ ಶಿಕ್ಷಣ ನೀಡ ಲಾಗುತ್ತಿದೆ. 8 ದಶಕದಿಂದಲೂ ಈ ಸೇವೆ ಮುಂದುವರಿಸಿಕೊಂಡು ಬಂದಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಪ್ರಶಸ್ತಿಯನ್ನು ಘೋಷಣೆ ಮಾಡುವಂತೆ ಪತ್ರದಲ್ಲಿ ಎಸ್.ಎಂ.ಕೃಷ್ಣ ಕೋರಿದ್ದಾರೆ. ಇದರಿಂದ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರೆ ಭಕ್ತರು ಸಂಭ್ರಮಿಸುತ್ತಾರೆ ಎಂದು ಪತ್ರದಲ್ಲಿ ಹೇಳಿಕೊಂಡಿದ್ದಾರೆ.

ಕನ್ನಡದ ಕರ್ಮಯೋಗಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿ ಗುರುವರ್ಯರು ಭಕ್ತರ ಪಾಲಿನ ನಡೆದಾಡುವ ದೇವರು ಎಂದು ಪ್ರಸಿದ್ದಿಯನ್ನು ಹೊಂದಿದವರು. ಶ್ರೀಗಳು ಕಳೆದ ಒಂದು ದಶಕದಿಂದಲೂ ಸಮಾಜದ ಕಲ್ಯಾಣಕ್ಕಾಗಿ ಶ್ರಮಿಸುತ್ತಾ ಬಂದಿದ್ದಾರೆ. ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. ೧೨ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. 1941ರಿಂದ ಶಿವಕುಮಾರ ಸ್ವಾಮೀಜಿ ಅವರು ಮಠದ ಮುಖ್ಯಸ್ಥ ರಾಗಿದ್ದರು ಅಂದಿನಿಂದ ಇಂದಿನವರೆಗೂ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.

ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.