ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ) ಯು 337 ಡ್ರಾಫ್ಟ್ಸ್‌ಮನ್ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
341

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ) ಯು 337 ಬಹು ನುರಿತ ಕೆಲಸಗಾರ,ಡ್ರಾಫ್ಟ್ಸ್‌ಮನ್ ಮತ್ತು ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯ್ರಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಸೆಪ್ಟೆಂಬರ್ 20,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಸ್ಟಾಫ್ ಸೆಲೆಕ್ಷನ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ)

ಸಂಸ್ಥೆ (Organisation): ಬಹು ನುರಿತ ಕೆಲಸಗಾರ,ಡ್ರಾಫ್ಟ್ಸ್‌ಮನ್, ಮೇಲ್ವಿಚಾರಕ

ವಿದ್ಯಾರ್ಹತೆ (Educational Qualification): ಮೆಟ್ರಿಕ್ಯುಲೇಶನ್, 10+2 / ದ್ವಿತೀಯ ಪಿಯುಸಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಿ ತಿಳಿಯಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): September 20, 2019

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 50/-ರೂ ಅನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ) ಯ ಅಧಿಕೃತ ವೆಬ್‌ಸೈಟ್‌ http://bro.gov.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 20,2019 ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕು. ಕಚೇರಿಯ ವಿಳಾಸವನ್ನು ಅಧಿಸೂಚನೆಯಲ್ಲಿದೆ.

ಹೆಚ್ಚಿನ ಮಾಹಿತಿಗಾಗಿ: http://bro.gov.in/ ಕ್ಲಿಕ್ ಮಾಡಿ.