BSF ನಲ್ಲಿ ಖಾಲಿಯಿರುವ 1072 ಹೆಡ್‌ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
434

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) 1072 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 12,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: UPSC ನೇಮಕಾತಿ ಅಸಿಸ್ಟೆಂಟ್ ಹೈಡ್ರೋಜಿಯೋಲಜಿಸ್ಟ್ ಮತ್ತು ಡೈರೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಹೆಡ್ ಕಾನ್ಸ್‌ಟೇಬಲ್

ಸಂಸ್ಥೆ (Organisation): ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ / ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಮತ್ತು ಹುದ್ದೆಗೆ ಸಂಬಂಧಪಟ್ಟಂತೆ ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸಲು (Application End Date): June 12, 2019

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1XlRy4bKhGc-coQ_xhIpDC5S2SyMvkjx3/view ಕ್ಲಿಕ್ ಮಾಡಿ.