ನೀವು ಹೋಟೆಲ್ ಅಥವಾ ರೆಸ್ಟೋರೆಂಟ್-ನಲ್ಲಿ ನೀರಿನ ಬಾಟಲಿಯನ್ನು ಖರೀದಿಸುತ್ತೀರ, ಹಾಗಾದರೆ ಇದನ್ನು ನೀವು ಖಂಡಿತ ಓದಲೇಬೇಕು…!

0
1269

ಹೋಟೆಲ್‍ಗಳಲ್ಲಿ MRP-ಗಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಇದನ್ನು ಪ್ರಶ್ನಿಸಿದ ಕೇಂದ್ರ ಸರ್ಕಾರಕ್ಕೆ ನ್ಯಾ. ಎಫ್ ನಾರಿಮನ್ ಪೀಠ, ಹೋಟೆಲ್, ರೆಸ್ಟೊರೆಂಟ್-ಗೆ ಯಾರೂ ಕುಡಿಯವ ನೀರನ್ನು ಖರೀದಿಸಲು ಹೋಗುವುದಿಲ್ಲ ಎಂದು ಉತ್ತರಿಸಿದೆ.

ಫೆಡರೇಷನ್ ಆಫ್ ಹೋಟೆಲ್ ಅಂಡ್ ರೆಸ್ಟೊರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (FHRAI) ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹೋಟೆಲ್ ಮತ್ತು ರೆಸ್ಟೊರೆಂಟ್ ಗಳು ಲೀಗಲ್ ಮೆಟ್ರೋಲಜಿ ಕಾಯ್ದೆಯ ವ್ಯಾಪ್ತಿಯ ಅಡಿಯಲ್ಲಿ ಬರುವುದಿಲ್ಲ ಅದಕ್ಕೆ MRP-ಗಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಲು ಏನು ಅಡ್ಡಿ ಇಲ್ಲ ಎಂದಿದೆ.

ಏನಿದು ವಿವಾದ ಅಂತೀರ, 2009 ರ ಕಾಯ್ದೆಯಡಿ ನೀರಿನ ಬಾಟಲಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡೋ ರೆಸ್ಟೊರೆಂಟ್ ಹಾಗೂ ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳುವ ಸರ್ಕಾರದ ಅಧಿಕಾರವನ್ನು ದೆಹಲಿ ಹೈ ಕೋರ್ಟ್ 2015ರ ಆಗಸ್ಟ್ ನಲ್ಲಿ ಎತ್ತಿ ಹಿಡಿದಿತ್ತು. ಈ ಆದೇಶಕ್ಕೆ ಪ್ರಶ್ನಿಸಿ FHRAI ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಆದ್ರೆ ಅದು ತಿರಸ್ಕೃತವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು.

ಈ ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ, MRP-ಗಿಂತ ಹೆಚ್ಚಿನ ಬೆಲೆಯಲ್ಲಿ ಯಾರೇ ನೀರಿನ ಬಾಟಲಿಗಳನ್ನು ಮಾರಾಟ ಮಾಡಿದರೆ ಅವರು ದಂಡ ತೆರಬೇಕಾಗುತ್ತದೆ ಅಥವಾ ಜೈಲು ಶಿಕ್ಷೆ ಎದುರಿಸಬೇಕು ಎಂದು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿತ್ತು.

MRP-ಗಿಂತ ಹೆಚ್ಚಿನ ಬೆಲೆಗೆ ಮಾರಾಟ, ವಿತರಣೆ ಅಥವಾ ಡೆಲಿವರಿ ಮಾಡುವಾಗ ಸಿಕ್ಕಿಬಿದ್ದರೆ ಮೊದಲನೇ ಬಾರಿ 25 ಸಾವಿರ ರೂ, ಎರಡನೇ ಬಾರಿ ಅಪರಾಧಕ್ಕೆ 50 ಸಾವಿರ ರೂ. ಹಾಗೂ ನಂತರದ ಅಪರಾಧಗಳಿಗೆ 1 ಲಕ್ಷ ರೂ ದಂಡ ಅಥವಾ 1 ವರ್ಷ ಜೈಲು ಶಿಕ್ಷೆ ಅಥವಾ ಎರಡೂ ಶಿಕ್ಷೆ ವಿಧಿಸಲಾಗುತ್ತದೆ ದಂಡ ವಿಧಿಸಲಾಗುತ್ತದೆ ಎಂದು ಲೀಗಲ್ ಮೆಟ್ರೊಲಜಿ ಕಾಯ್ದೆಯ ಸೆಕ್ಷನ್ 36 ಹೇಳುತ್ತದೆ.

ಒಟ್ಟಿನಲ್ಲಿ ಮುಂದಿನ ಬಾರಿ ನೀವು ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್-ಗೆ ಹೋದಾಗ ಯಾವುದಕ್ಕೂ ನೀರಿನ ಬಾಟಲಿನ ಬೆಲೆ ಕೇಳುವುದು ಒಳ್ಳೆಯದು…!