ಜನವರಿ 31ಕ್ಕೆ ಸಚಿವ ಸಂಪುಟ ವಿಸ್ತರಣೆ; ಬಿಎಸ್​ವೈ ಪ್ಲಾನ್‌ಗೆ ಇನ್ನೂ ಇಲ್ಲ ವರಿಷ್ಠರ ಸಮ್ಮತಿ, ಮೂಲ-ವಲಸಿಗರ ನಡುವೆ ಶುರುವಾಗಿದೆ ಗುಪ್ತ ಜಟಾಪಟಿ.!

0
226

ಉಪಚುನಾವಣೆ ಮುಗಿದು ಅದೆಷ್ಟೋ ದಿನಗಳು ಕಳೆದ ನಂತರ ಅಂದರೆ ಇದೆ 31 ರಂದು ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಅದರಂತೆ ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ. ಬದಲಾಗಿ 9 ಶಾಸಕರಷ್ಟೇ ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಜೊತೆಗೆ ಇಬ್ಬರು ಮೂಲ ಬಿಜೆಪಿ ಶಾಸಕರನ್ನು ಸಂಪುಟಕ್ಕೆ ಸೇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇದಕ್ಕೆ ಬಿಜೆಪಿ ವರಿಷ್ಠರಿಂದ ಸಮ್ಮತಿ ಸಿಕ್ಕಿಲ್ಲ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

31ಕ್ಕೆ ಸಚಿವ ಸಂಪುಟ ವಿಸ್ತರಣೆ?

ಹೌದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಯದ್ದೇ ತಲೆನೋವಾಗಿದೆ. ವಿವಿಧ ಕಾರಣಗಳಿಂದ ವಿಳಂಬವಾಗುತ್ತಲೇ ಇರುವ ಸಂಪುಟ ವಿಸ್ತರಣೆಯ ದಿನವನ್ನು ಯಡಿಯೂರಪ್ಪ ಜ. 29ಕ್ಕೆ ಫಿಕ್ಸ್ ಮಾಡಿದ್ದರು. ಈಗ ಅದು ಜ. 31ಕ್ಕೆ ಹೋಗಿದೆ. ಶುಕ್ರವಾರ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ. ಆದರೆ, ಹೈಕಮಾಂಡ್ ಒಪ್ಪಿಗೆ ಮೇಲೆ ಎಲ್ಲವೂ ನಿಂತಿದೆ. ಸಂಪುಟ ವಿಸ್ತರಣೆಗೆ ಸಂಭಾವ್ಯ ಸಚಿವರ ಪಟ್ಟಿಯನ್ನು ಯಡಿಯೂರಪ್ಪ ಈಗಾಗಲೇ ಬಿ.ಎಲ್. ಸಂತೋಷ್ ಮೂಲಕ ಹೈಕಮಾಂಡ್​ಗೆ ತಲುಪಿಸಿದ್ಧಾರೆ. ಈ ಪಟ್ಟಿಗೆ ಹೈಕಮಾಂಡ್ ಕೂಡ ಒಪ್ಪಿತ್ತೆಂಬ ಸುದ್ದಿಗಳಿದ್ದವು.

ಮೂಲಗಳ ಪ್ರಕಾರ ಬಿಜೆಪಿ ಹೈ ಕಮಾಂಡ್‌ ವಲಸಿಗ ಶಾಸಕರ ಪೈಕಿ 6 ಜನರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕು ಎಂದಿದೆ. ಆದರೆ ಸಿಎಂ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಒಂದು ವೇಳೆ ವರಿಷ್ಠರು ಪಟ್ಟು ಸಡಿಲಿಸದೇ ಇದ್ದಲ್ಲಿ 9 ಪ್ಲಸ್‌ ಎರಡು ಸೂತ್ರವನ್ನು ಪ್ರಯೋಗ ಮಾಡುವುದು ಸಿಎಂ ಲೆಕ್ಕಾಚಾರವಾಗಿದೆ.

ಯಡಿಯೂರಪ್ಪ ಕೂಡ ಜ್ಯೋತಿಷಿಗಳ ಸಲಹೆ ಮೇರೆಗೆ ಜ. 29ಕ್ಕೆ ಸಂಪುಟ ವಿಸ್ತರಣೆಯ ದಿನ ನಿಗದಿ ಮಾಡಿದ್ದರು. ಆದರೆ, ಬಿಎಸ್​ವೈ ಕೊಟ್ಟಿರುವ ಪಟ್ಟಿ ಬಗ್ಗೆ ಹೈಕಮಾಂಡ್ ಸಂಪೂರ್ಣವಾಗಿ ಒಪ್ಪಿಕೊಂಡಿಲ್ಲ ಎಂಬ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಜ. 30, ಗುರುವಾರದಂದು ದೆಹಲಿಗೆ ಹೋಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿರುವ ಯಡಿಯೂರಪ್ಪ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ. ಜ. 30ರಂದು ಬೆಳಗ್ಗೆ 11:30ಕ್ಕೆ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೂಲ ಶಾಸಕರ ಗುಪ್ತ ಜಟಾಪಟಿ;

ಸಂಪುಟ ವಿಸ್ತರಣೆಯಾ ಅಥವಾ ಪುನಾರಚನೆಯಾ ಎಂಬ ಆತಂಕದಲ್ಲಿ ಹಾಲಿ ಸಚಿವರು ಮತ್ತು ಮಿತ್ರಮಂಡಳಿ ಶಾಸಕರು ಪರಸ್ಪರ ಒಗ್ಗಟ್ಟು ಕಾಯ್ದುಕೊಂಡಿದ್ದಾರೆ. ಸಂಪುಟ ಪುನಾರಚನೆ ಬೇಡವೇ ಬೇಡ ಅಂತ ಹಾಲಿ ಸಚಿವರು ಪಟ್ಟು ಹಿಡಿದಿದ್ದಾರೆ. ಮಿತ್ರಮಂಡಳಿಗೆ ಏನಾದ್ರೂ ಕೊಟ್ಕೊಳ್ಳಿ, ನಮ್ಮನ್ನು ಮಾತ್ರ ಮುಟ್ಟಬೇಡಿ. ನಮ್ಮ ತಂಟೆಗೆ ಬರಬೇಡಿ, ನಮ್ಮ ಖಾತೆಗೆ ಕೈ ಹಾಕಬೇಡಿ ಎಂದು ಹಾಲಿ ಸಚಿವರು ಯಡಿಯೂರಪ್ಪ ಎದುರು ಬೇಡಿಕೆ ಇಟ್ಟಿದ್ದಾರಂತೆ. ಪುನಾರಚನೆ ನೆಪದಲ್ಲಿ ತಮ್ಮ ಖಾತೆ ಹೋಗುವ ಆತಂಕದಲ್ಲಿರುವ ಈ ಸಚಿವರು ಇಷ್ಟು ಕಾಲ ತಮ್ಮ ನಡುವೆ ಇದ್ದ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿದ್ದಾರೆ ಎನ್ನಲಾಗಿದೆ. ಒಗ್ಗಟ್ಟಿನಿಂದ ಸಂಪುಟ ಪುನಾರಚನೆಗೆ ಎಲ್ಲ ಸಚಿವರೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

Also read: ಕನ್ನಡ ಕಗ್ಗೊಲೆ ಮಾಡಿದ ಸಚಿವ ಶ್ರೀರಾಮುಲುಗೆ ಕನ್ನಡ ಕಲಿಯಲು ಪುಸ್ತಕ ಕೊಟ್ಟ ಕಾಂಗ್ರೆಸ್ ನಾಯಕಿ’ ಹೇಳಿದ ಪಾಠವೇನು??