ಡಿಕೆ ಶಿವಕುಮಾರ್ ಅವರಿಗೆ ಸಿಕ್ಕಿತಾ ಕೆಪಿಸಿಸಿ ಪಟ್ಟ? ಮತ್ತೆ ವರದಿ ತರಿಸಿಕೊಂಡ ಹೈಕಮಾಂಡ್, ಎಸ್.ಎಂ.ಕೃಷ್ಣ ನಿವಾಸಕ್ಕೆ ಡಿಕೆಶಿ ಅವರು ಭೇಟಿ ನೀಡಿದ್ಯಾಕೆ.!

0
207

ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಹಲವು ಬೆಳವಣಿಗಳು ಕಂಡು ಬಂದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಬೇಟಿ ಫಲ ನೀಡಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ಸಿದ್ದರಾಮಯ್ಯ ಬಣಕ್ಕೆ ಪಟ್ಟ ಕಟ್ಟಬೇಕೆ ಅಥವಾ ಡಿಕೆ ಶಿವಕುಮಾರ್​ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆ ಎಂಬ ಗೊಂದಲ ಮುಂದುವರೆದಿದೆ. ಈ ಮೂಲಕ ಪಕ್ಷದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇನ್ನು ಸ್ವಲ್ಪ ಗೊಂದಲ ಸೃಷ್ಟಿ ಮಾಡಿದೆ.

Also read: ಬೆಂಗಳೂರು ಗುರು ರಾಘವೇಂದ್ರ ಬ್ಯಾಂಕ್​-ಗೆ ಆರ್​ಬಿಐನಿಂದ ನಿರ್ಬಂಧ; ಬ್ಯಾಂಕ್‌ನಿಂದ ಸಾಲಪಡೆದವರೇ ಹೊಣೆ ಎಂದ ಬ್ಯಾಂಕ್ ಮಂಡಳಿ.!

ಹೌದು ಈಗಾಗಲೇ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡಿರುವ ಹೈಕಮಾಂಡ್​, ಈ ಕುರಿತು ಚರ್ಚೆ ನಡೆಸಿದೆ. ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡುವುದರ ಜೊತೆಗೆ ಪ್ರಭಾವಿ ಲಿಂಗಾಯತ ಸಮುದಾಯಕ್ಕೆ ಈ ಬಾರಿ ಅಧ್ಯಕ್ಷ ಸ್ಥಾನ ನೀಡಬೇಕು. ಈ ಹಿನ್ನೆಲೆಯಲ್ಲಿ ಎಂಬಿ ಪಾಟೀಲ್​ ಇದಕ್ಕೆ ಸೂಕ್ತ ವ್ಯಕ್ತಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ, ಮೂಲ ಕಾಂಗ್ರೆಸ್ಸಿಗರ ಮತ್ತೊಂದು ಬಣವು ಸಿದ್ದರಾಮಯ್ಯ ಬೆಂಬಲಿತ ಅಭ್ಯರ್ಥಿಯ ಆಯ್ಕೆಗೆ ನಕಾರ ತೋರಿದ್ದು, ಹೈ ಕಮಾಂಡ್​ನಲ್ಲಿ ತಲೆ ನೋವು ತರಿಸಿದೆ. ಹೈಕಮಾಂಡ್ ಸಾಮಾಜಿಕ ನ್ಯಾಯದ ಲೆಕ್ಕಾಚಾರದಲ್ಲಿ, ಜಾತಿ ಮತ್ತು ಪ್ರಾದೇಶಿಕತೆ ಆಧಾರದಲ್ಲಿ ಕೆಪಿಸಿಸಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕನ ಹುದ್ದೆಗಳಿಗೆ ವಾರಾಂತ್ಯದೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

Also read: ಡಿ.ಕೆ.ಶಿವಕುಮಾರ್ ಬದಲು ಎಂ.ಬಿ.ಪಾಟೀಲ್ ಹೆಸರನ್ನ ರೇಸಿಗೆ ಬಿಟ್ಟ ಸಿದ್ದರಾಮಯ್ಯ; ಡಿ.ಕೆ.ಶಿ ಅವರು ಕೆಪಿಸಿಸಿ ಅಧ್ಯಕ್ಷರಾದರೆ ಸಿದ್ದರಾಮಯ್ಯನಿಗೆ ಸಮಸ್ಯೆ ಏನು.?

ಎಲ್ಲವೂ ಉಲ್ಟಾ-ಪಲ್ಟಾ;

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಿಕೊಳ್ಳಲು ಆರಂಭದಿಂದಲೂ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಹಾಗೂ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹೆಸರು ಕೇಳಿ ಬಂದಿತ್ತು. ಈ ಪೈಕಿ ಡಿಕೆಶಿಗೆ ಕೆಪಿಸಿಸಿ ಪಟ್ಟ ಒಲಿಸುವುದು ಪಕ್ಕಾ ಎಂದೇ ಹೇಳಲಾಗುತ್ತಿತ್ತು. ಆದರೆ, ಎರಡೇ ದಿನಗಳಲ್ಲಿ ಎಲ್ಲವೂ ಉಲ್ಟಾ-ಪಲ್ಟಾ ಆಗುವ ಲಕ್ಷಣಗಳು ಎದ್ದು ಕಾಣುತ್ತಿವೆ. ಒಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತಿದ್ದಾರೆ. ಇನ್ನೊಂದು ಕಡೆಯಲ್ಲಿ ಡಿ.ಕೆ.ಶಿವಕುಮಾರ್ ಅನುಮಾನ ಹುಟ್ಟಿಸುವಂತಾ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ರಾಜಕಾರಣ ಮಾಡುವವರು ಬೇಕಾದ್ರೆ ಮಾಡಿಕೊಳ್ಳಲಿ ಎಂಬ ಮಾತಿನ ಮರ್ಮವೇನು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತಿದೆ.

ಎಸ್.ಎಂ.ಕೃಷ್ಣ ನಿವಾಸಕ್ಕೆ ಡಿಕೆಶಿ ಭೇಟಿ;

Also read: ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಮನೆಯ ಮೇಲೆ ಐಟಿ ರೈಡ್ ; ಮೂರು ಕಾರಣಗಳಿಂದ ರಶ್ಮಿಕಾ ಮನೆ ಮೇಲೆ ದಾಳಿ ನಡೆಯಿತಾ.?

ಹೈ ಕಮಾಂಡ್ ತಿರ್ಮಾನದಲ್ಲಿ ಏನೋ ಅನುಮಾನಗಳು ಕಂಡು ಬರುತ್ತಿದ್ದು. ಎಸ್.ಎಂ.ಕೃಷ್ಣ ನಿವಾಸಕ್ಕೆ ಡಿಕೆಶಿ ಭೇಟಿ ನೀಡಿದ್ದರು. ಬಳಿಕ ಮಾತನಾಡಿದ ಶಾಸಕ ಡಿ.ಕೆ.ಶಿವಕುಮಾರ್, ಬೇಕಿದ್ದಲ್ಲಿ ಕನಕಪುರದ ಹೊಲದಲ್ಲಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ. ಇತ್ತೀಚಿಗೆ ಡಿಕೆಶಿ ನೀಡಿರುವ ಈ ಹೇಳಿಕೆಗಳೇ ಸಾಕಷ್ಟು ಅನುಮಾನಗಳನ್ನು ಹುಟ್ಟಿಸುತ್ತಿವೆ. ಹೈಕಮಾಂಡ್ ಮಟ್ಟದಲ್ಲಿ ಹಿನ್ನಡೆ ಅನುಭವಿಸಿದ ಸುಳಿವು ಹಿಡಿದುಕೊಂಡರಾ ಡಿ.ಕೆ.ಶಿವಕುಮಾರ್ ಎಂಬ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ. ಒಟ್ಟಾರೆಯಾಗಿ ಡಿಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಸಿಕ್ಕರೆ ರಾಜ್ಯದಲ್ಲಿ ಕಾಂಗ್ರೆಸ್ ಒಳ್ಳೆಯ ರೀತಿಯಲ್ಲಿ ಅಧಿಕಾರಕ್ಕೆ ಬರುತ್ತೆ ಎನ್ನುವುದು ಹಲವರ ಅಭಿಪ್ರಾಯ ಆದರೆ ಜಾತಿ ವಿಷಯವಾಗಿ ಹೋಗುತ್ತಿರುವ ಹೈ ಕಮಾಂಡ್ ವಿಚಾರವನ್ನು ಏನೆನ್ನುವುದು ಕಾದು ನೋಡಬೇಕಿದೆ.