ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ, ಕಾಂಗ್ರೆಸ್ ಶಾಸಕರು ಮತ್ತು ಸಂಸದರು ತಲಾ 1 ಲಕ್ಷ ರೂ. ದೇಣಿಗೆ ನೀಡಲಿದ್ದಾರೆ; ಡಿಕೆ ಶಿವಕುಮಾರ್.!

0
271

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸರ್ಕಾರ ಕೊರೊನಾ ನಿಯಂತ್ರಿಸಲು ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುಧ್ಧ ಗುಡಿಗಿದ್ದಾರೆ. ಅದರಂತೆ ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆ ನೀಡಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ ರಾಜ್ಯ ಸರ್ಕಾರ ಎಲ್ಲಾ ಪಕ್ಷಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಇಲ್ಲಿಯವರೆಗೆ ಸರ್ವ ಪಕ್ಷದ ಸಭೆಯನ್ನೇ ಕರೆದಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಖಂಡಿಸಿದರು.

ಶಾಸಕ, ಸಂಸದರಿಂದ ತಲಾ 1 ಲಕ್ಷ ರೂ. ದೇಣಿಗೆ?

ಹೌದು ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಆರ್ ಎಸ್ಎಸ್ ಹಾಗೂ ಬಿಜೆಪಿಯವರ ತರಹ ಬೀದಿಗಿಳಿದು ವಸೂಲಿ ಮಾಡುವುದಿಲ್ಲ. ಈ ರೀತಿ ಹಣ ಹಾಗೂ ದವಸ ಧಾನ್ಯ ಸಂಗ್ರಹಿಸಲು ನಮ್ಮ ಪಕ್ಷ ಪ್ರೋತ್ಸಾಹ ನೀಡುವುದಿಲ್ಲ ಎಂದರು.

ನಮ್ಮ ಪಕ್ಷದ ಶಾಸಕರುಗಳು ಕೆಪಿಸಿಸಿ ರಿಲೀಫ್ ಫಂಡ್ ಗೆ ತಲಾ ಒಂದು ಲಕ್ಷ ಕೊಡಲೇಬೇಕು, ಇನ್ನೂ ಸಾಮರ್ಥ್ಯ ಇರುವವರು ಹೆಚ್ಚು ಕೊಡಬಹುದು ಎಂದರು. ಕೊರೋನಾ ಸೋಂಕು ನಿಯಂತ್ರಣ ವಿಚಾರವಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇತರೆ ನಾಯಕರುಗಳು ರಾಷ್ಟ್ರ ಮಟ್ಟದಲ್ಲಿ ಸರ್ಕಾರಕ್ಕೆ ಸಹಕಾರ ನೀಡುತ್ತಿದ್ದಾರೆ. ರಾಜ್ಯದಲ್ಲಿ ನಾವೂ ಕೂಡ ಸರ್ಕಾರದ ಜತೆ ನಿಲ್ಲುತ್ತೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ತೆಗೆದುಕೊಂಡಿರುವ ಅನೇಕ ಕಾರ್ಯಕ್ರಮ, ಘೋಷಣೆಗಳಿಗೆ ನಮ್ಮಿಂದ ಸಂಪೂರ್ಣ ಸಹಕಾರವಿರುತ್ತದೆ ಎಂದು ಹೇಳಿದರು.

ಸರಿಯಾದ ಕೊರೋನಾ ಕಿಟ್ ವ್ಯವಸ್ಥೆ ಇಲ್ಲ:

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ ರಾಜ್ಯ ಸರ್ಕಾರ ಎಲ್ಲಾ ಪಕ್ಷಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಇಲ್ಲಿಯವರೆಗೆ ಸರ್ವ ಪಕ್ಷದ ಸಭೆಯನ್ನೇ ಕರೆದಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಂಡಿಸಿದರು. ಆಸ್ಪತ್ರೆಗಳಲ್ಲಿ ಸರಿಯಾದ ಕೊರೋನಾ ಕಿಟ್ ವ್ಯವಸ್ಥೆ ಇಲ್ಲ. ಇಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅದನ್ನು ಪರಿಹರಿಸಲು ಸರ್ಕಾರ ಒದ್ದಾಡುತ್ತಿದೆ ಎಂದು ಡಿಕೆಶಿ ಆರೋಪ ಮಾಡಿದರು. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ರೇಷ್ಮೆ ಸೇರಿದಂತೆ ಹಲವು ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ. ಮಾರುಕಟ್ಟೆಗಳನ್ನ ಕೂಡಲೇ ತೆರೆಯಬೇಕು. ಪದಾರ್ಥಗಳನ್ನ ಹೆಚ್ಚು ದಿನ ಸಂಗ್ರಹ ಮಾಡಿಕೊಳ್ಳಲು ಆಗುವುದಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಯೋಚಿಸಿ ಬಗೆಹರಿಸಬೇಕು ಎಂದವರು ಒತ್ತಾಯ ಮಾಡಿದರು.

Also read: ಒಂದೇ ಕುಟುಂಬದ 12 ಜನರಲ್ಲಿ ಕೊರೊನಾ ಪತ್ತೆ; ಒಂದೇ ದಿನ 969 ಬಲಿ, ಏನಿದು ಕೊರೊನಾ ಅಟ್ಟಹಾಸ.?