ರಾಜ್ಯದ ಜನತೆಗೆ ಕಾದಿದೆ ಮತ್ತೊಂದು ಶಾಕ್, ವಿದ್ಯುತ್ ಬೆಲೆ ಶೀಘ್ರದಲ್ಲೇ ಏರಿಕೆಯಾಗಲಿದೆ…

0
512

ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗ್ಲೇ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿವೆ. ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಂಡು, ಮತ ಬ್ಯಾಂಕ್ ಗಾಗಿ ಯಾತ್ರೆಗಳು, ಸಮಾವೇಶಗಳನ್ನು ಒಂದರ ಹಿಂದಂತೆ ಒಂದನ್ನು ಹಮ್ಮಿಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಆಢಳಿತಾರೂಢ ಕಾಂಗ್ರೆಸ್ ಪಕ್ಷ ಈ ಬಾರಿಯೂ ಅಧಿಕಾರದ ಗದ್ದುಗೆ ಹಿಡಿಯಲು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ ಈ ಹೊತ್ತಿನಲ್ಲೇ ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ವಿದ್ಯುತ್ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಇದು ಜನ ಸಾಮಾನ್ಯರಿಗೆ ಹೊರೆಯಾದರೆ, ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಲಿದೆ.

ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ವಿದ್ಯುತ್ ಸರಬರಾಜು ಕಂಪನಿ ಮನವಿ ಮಾಡಿಕೊಂಡಿದೆ. ಪ್ರತಿ ಯೂನಿಟ್ ಗೆ ಒಂದು ರೂಪಾಯಿ ಏರಿಕೆ ಮಾಡುವಂತೆ ಐದು ವಿದ್ಯುತ್ ಕಂಪನಿಗಳು ಈಗಾಗಲೇ ಮನವಿ ಮಾಡಿಕೊಂಡಿವೆ. ಆದರೆ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ 1.46 ಪೈಸೆ ದರ ಏರಿಕೆಗೆ ಮನವಿ ಮಾಡಿದೆ. ಹೀಗಾಗಿ ಇದೀಗ ರಾಜ್ಯ ಸರ್ಕಾರ ದರ ಏರಿಕೆ ಕಾಂಗ್ಸೆಸ್ ಪಕ್ಷವನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ.

ಇನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಸಾರ್ವಜನಿಕ ಅಹವಾಲು ಸ್ವೀಕಾರವಾದ ಬಳಿಕ ದರ ಏರಿಕೆಯಾಗಲಿದೆ. ಈ ಹಿಂದೆಯೇ ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆಗ ವಿದ್ಯುತ್ ಕಂಪನಿಗಳು ಪ್ರತಿ ಯೂನಿಟ್ಗೆ 1 ರೂಪಾಯಿ 48 ಪೈಸೆ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದವು.

ಸದ್ಯ ಚುನಾವಣೆಗೆ ದಿನಗಳೆಣಿಸುತ್ತಿರುವ ಈ ಹೊತ್ತಲ್ಲಿ ವಿದ್ಯುತ್ ದರ ಏರಿಕೆ ಆಢಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಭಯ ಹುಟ್ಟಿಸಿದೆ.