ನೆರೆಪೀಡಿತ ಗ್ರಾಮಕ್ಕೆ 10 ಕೋಟಿ ದೇಣಿಗೆ ನೀಡಿದರೆ ಗ್ರಾಮಕ್ಕೆ ದಾನಿಯ ಹೆಸರು ನಾಮಕರಣ; ಈ ನಿರ್ಧಾರ ಸರಿನಾ??

0
263

ರಾಜ್ಯದಲ್ಲಿ ನೂರಾರು ಸಾವಿರಾರು ಹಳ್ಳಿಗಳು ಪ್ರವಾಹಕ್ಕೆ ಸಿಳುಕ್ಕಿದ್ದು, ಎಲ್ಲವನ್ನು ಕಳೆದುಕೊಂಡು ಹೊತ್ತಿನ ಊಟಕ್ಕೆ ಕೈಚಾಚುವ ಪರಿಸ್ಥಿತಿ ಬಂದಿದ್ದು, ಸರ್ಕಾರ ನೆರೆಯಲ್ಲಿರುವವರಿಗೆ ಪರಿಹಾರ ನೀಡುತ್ತೆ ಎನ್ನುವ ಭರವಸೆಯಲ್ಲಿದ್ದಿದ್ದಾರೆ. ಅದರಂತೆ ಇಲ್ಲಿಯವರೆಗೆ ಹಲವು ಸಂಘ ಸಂಸ್ಥೆಗಳೂ ಜನರು ಕೂಡ ಸಹಾಯ ಮಾಡಿದ್ದಾರೆ. ಇನ್ನೂ ಸಾಕಷ್ಟು ಹಣ ಬೇಕಿರುವ ಕಾರಣ, ಮುಖ್ಯಮಂತ್ರಿಗಳು ಹೊಸ ಪ್ಲಾನ್ ಮಾಡಿದ್ದು ನೆರೆ ಪೀಡಿತ ಗ್ರಾಮಗಳ ಪುನಶ್ಚೇತನಕ್ಕೆ 10 ಕೋಟಿ ರು.ಗಿಂತ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ, ದಾನಿಗಳ ಹೆಸರನ್ನು ಪುನಶ್ಚೇತನಗೊಳ್ಳುವ ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

Also read: ಪ್ರವಾಹ ಸಂತ್ರಸ್ತರು ಯಾವುದೇ ದಾಖಲೆಗಳಿಲ್ಲದೆ ಜೀವ ವಿಮೆ, ವಾಹನ ವಿಮೆ ಮತ್ತು ಗೃಹ ವಿಮೆಯ ಕ್ಲೇಮ್ ಮಾಡಿಕೊಳ್ಳಬಹುದು ಹೇಗೆ ಅಂತ ಇಲ್ಲಿದೆ ನೋಡಿ..

10 ಕೋಟಿ ದೇಣಿಗೆ ನೀಡಿದವರ ಹೆಸರು ಗ್ರಾಮಕ್ಕೆ?

ಹೌದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಧಾನಸೌಧದಲ್ಲಿ ಉದ್ದಿಮೆದಾರರೊಂದಿಗೆ ಸಭೆ ನಡೆಸಿ ನೆರೆ ಪೀಡಿತ ಪ್ರದೇಶಗಳಿಗೆ ದೇಣಿಗೆ ನೀಡುವಂತೆ ಮನವಿ ಮಾಡಿ. ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಅವರ ನೆರವಿಗೆ ಎಲ್ಲಾ ಕೈಗಾರಿಕೋದ್ಯಮಿಗಳು ನಿಂತು ಉದಾತ್ತವಾಗಿ ದೇಣಿಗೆ ನೀಡಬೇಕು. ಅದರಂತೆ 80 ತಾಲೂಕುಗಳನ್ನು ನೆರೆಪೀಡಿತ ಎಂದು ಘೋಷಿಸಲಾಗಿದೆ. ಮಹಾರಾಷ್ಟ್ರ, ಕೇರಳ, ಕರ್ನಾಟಕದಲ್ಲಿ ಮಳೆಯಿಂದ ಭೂಕುಸಿತ ಸಂಭವಿಸಿದೆ. ಹಳ್ಳಿ, ಪಟ್ಟಣ ಜಲಾವೃತವಾಗಿದೆ. ಸೇತುವೆ ಮುಳುಗಿ, ರಸ್ತೆ ಹಾಳಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ.

Also read: ನೆರೆ ಸಂತ್ರಸ್ತರಿಗೆ ಬೇಕಾಬಿಟ್ಟಿ ಹಣ ಕೊಡಲು ನೋಟ್​ ಪ್ರಿಂಟ್​ ಮಾಡಲ್ಲ ಎಂದ ಯಡಿಯೂರಪ್ಪ; ಹಾಗಾದ್ರೆ ಸಂತ್ರಸ್ತರಿಗೆ ಪರಿಹಾರ ಸಿಗುವುದು ನಿಜವಾ??

ಈವರೆಗೆ 6.97 ಲಕ್ಷ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. 1160 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. 56 ಸಾವಿರ ಮನೆಗಳು ವಾಸಕ್ಕೆ ಯೋಗ್ಯವಿಲ್ಲ ಎಂದು ಘೋಷಿಸಿದ್ದೇವೆ. ರಕ್ಷಣೆ ಕಾರ್ಯ ಭರದಿಂದ ಸಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಹತೋಟಿಗೆ ಬಂದಿದ್ದು, ಇನ್ನೂ ಸಂಪೂರ್ಣ ಚಿತ್ರಣ, ನಷ್ಟತಿಳಿಯಲು ಕೆಲವು ದಿನ ಬೇಕಾಗಿದೆ. ಆದರಿಂದ 200 ಗ್ರಾಮಗಳನ್ನು ಸ್ಥಳಾಂತರಿಸುವ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಉದ್ದಿಮೆದಾರರು ಸಹಾಯ ಹಸ್ತ ಚಾಚಬೇಕು. ಉದಾರ ಮನಸ್ಸಿನಿಂದ ದೇಣಿಗೆ ನೀಡಬೇಕು. 10 ಕೋಟಿ ರು.ಗಿಂತ ಹೆಚ್ಚು ನೆರವು ನೀಡಿದ ಗ್ರಾಮಕ್ಕೆ ನಿಮ್ಮ ಸಂಸ್ಥೆಯ ಹೆಸರನ್ನಿಡಲು ತೀರ್ಮಾನಿಸಲಾಗಿದೆ.

Also read: ಪ್ರವಾಹಕ್ಕೆ ನೀಡಿದ ರಜೆ ಸರಿದೂಗಿಸಿಕೊಳ್ಳಲು ದಸರಾ ರಜೆ ಕಡಿತಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ; ಶನಿವಾರ, ಭಾನುವಾರವು ಶಾಲೆ??

ಆ ಗ್ರಾಮವನ್ನು ಹಣ ನೀಡುವ ಸಂಸ್ಥೆ ದತ್ತು ಪಡೆದುಕೊಂಡಂತೆ ಬಿಂಬಿಸಲಾಗುವುದು. ಬಟ್ಟೆ, ಆಹಾರ ಧಾನ್ಯ ಇತರೆ ಮೂಲಸೌಕರ್ಯ ಒದಗಿಸಿಕೊಡುವ ಬದಲು ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರೆ ಸಂತ್ರಸ್ತರಿಗೆ ಹೆಚ್ಚು ನೆರವಾಗಲಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ತೀವ್ರವಾಗಿ ಖಂಡಿಸಿರುವ ಜೆಡಿಎಸ್​ ಸಿಎಂ ನಿರ್ಧಾರ ತುಘಲಕ್​ ನಿರ್ಧಾರದಂತಿದೆ. ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ. ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಖಾರವಾಗಿ ಟ್ವಿಟರ್​ನಲ್ಲಿ ಪ್ರತಿಕ್ರಿಯಿಸಿದೆ. ಒಂದು ವೇಳೆ 10 ಕೋಟಿ ನೀಡಿದವರ ಹೆಸರನ್ನು ಗ್ರಾಮಕ್ಕೆ ಇಟ್ಟರೆ ಯಾವರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತೆ ಎನ್ನುವುದು ನೋಡಬೇಕಿದೆ.