ರಾಜ್ಯದಲ್ಲಿ ಮತ್ತೆ ಶುರುವಾದ ಮಳೆ; ಮನೆ ಕುಸಿದು ಇಬ್ಬರು ಮಕ್ಕಳು ಸೇರಿ 17 ಮಂದಿ ಸಾವು.!

0
383

ಮತ್ತೆ ಮಳೆಯ ರುದ್ರನರ್ತನ ಶುರುವಾಗಿದ್ದು, ಕರ್ನಾಟಕದ ಜನರಿಗೆ ಭಯ ಹುಟ್ಟಿದೆ, ಏಕೆಂದರೆ ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ಇಬ್ಬರು ಮಕ್ಕಳು ಸೇರಿ ಸುಮಾರು 17 ಮಂದಿ ಮೃತಪಟ್ಟ ಘಟನೆ ಮೆಟ್ಟುಪಾಳಯಂನ ನಡೂರ್ ಗ್ರಾಮ ಹಾಗೂ ಅದರ ಆಸುಪಾಸಿನಲ್ಲಿ ನಡೆದಿದೆ. ತಮಿಳುನಾಡಿನ ತಿರುವಲ್ಲೂರು, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಪಾಂಡಿಚೇರಿಯಲ್ಲೂ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದಲ್ಲೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ತಿರುವಳ್ಳೂರ್, ವೆಲ್ಲೂರ್, ತಿರುವಣ್ಣಾಮಲೈ, ತೂತ್ತುಕುಡಿ, ರಾಮನಾಥಪುರಂ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಯಮತ್ತೂರಿನಲ್ಲಿ 3 ಮನೆಗಳು ಕುಸಿದ ಪರಿಣಾಮ 7 ವರ್ಷದ ಮಗು ಸೇರಿ 17 ಜನ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವು ಮಂದಿ ಸಿಲುಕಿರುವ ಅನುಮಾನವಿದ್ದು, ಘಟನೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡ ದೌಡಾಯಿಸಿದೆ. ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಮೆಟ್ಟುಪಾಳಯಂನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಮೃತ ದುರ್ದೈವಿಗಳನ್ನು ಗುರು(45), ರಾಮ್ನಾಥ್(20), ಆನಂದ್ ಕುಮಾರ್(40), ಹರಿಸುಧ(16), ಶಿವಕಾಮಿ(45), ಓವಿಯಮ್ಮಳ್(50), ನಾಥಿಯಾ(30), ವೈದೇಹಿ(40), ತಿಲಕವತಿ(50), ಅರುಕಾನಿ(55), ರುಕ್ಮಿಣಿ(40), ನಿವೇತ(18), ಚಿನ್ನಮ್ಮಳ್(70), ಅಕ್ಷಯ(7) ಹಾಗೂ ಲೊಗುರಂ(7) ಎಂಬುದಾಗಿ ಗುರುತಿಸಲಾಗಿದೆ. ಇಂದು ಬೆಳಗ್ಗೆ ಈ ದುರಂತ ಸಂಭವಿಸಿದೆ. ಘಟನೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡ ದೌಡಾಯಿಸಿದೆ. ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಮೆಟ್ಟುಪಾಳಯಂನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮೃತಪಟ್ಟ 17 ಮಂದಿ ಕೂಡ ತಮ್ಮ ತಮ್ಮ ಮನೆಗಳಲ್ಲಿ ನಿದ್ರೆಯಲ್ಲಿದ್ದ ಸಂದರ್ಭದಲ್ಲಿ ಅಂದರೆ ಬೆಳಗ್ಗೆ 5.30ರ ಸಮಯದಲ್ಲಿ ಮನೆಯ ಗೋಡೆ ಕುಸಿದಿದೆ ಎನ್ನಲಾಗಿದೆ. ಕುಸಿದ ಮನೆಗಳಲ್ಲಿ 4 ಮನೆ ಹೆಂಚಿನ ಮನೆಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಕಟದಲ್ಲೂ ಮತ್ತೆ ಮಳೆ?

ರಾಜ್ಯದ ವಿವಿಧ ಭಾಗಗಳಲ್ಲಿ ಚಿಕ್ಕ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಹಾವೇರಿ, ಕೊಡಗು ಸೇರಿ ವಿವಿಧ ಭಾಗಗಳಲ್ಲಿ ಚಿಕ್ಕ ಪ್ರಮಾಣದಲ್ಲಿ ಮಳೆ ಆಗಲಿದೆ. ಬೆಂಗಳೂರಿನಲ್ಲೂ ವರುಣ ಇಂದು ದರ್ಶನ ಕೊಡಲಿದ್ದಾನೆ. ಇಂದು ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದೆ. ಮಧ್ಯಾಹ್ನದ ವೇಳೆ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಇಡೀ ದಿನ ಇದೇ ವಾತಾವರಣ ಮುಂದುವರಿಯಲಿದೆ.

Also read: ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮಾಡಿ ಕೊಂದ ರೀತಿಯಲ್ಲಿ ನಮ್ಮ ಮಕ್ಕಳನ್ನು ಕೊಲ್ಲಿ; ಆರೋಪಿಗಳ ಕುಟುಂಬಸ್ಥರ ಹೇಳಿಕೆಗೆ ಭಾರಿ ಮೆಚ್ಚುಗೆ.!