ಬೆಂಗಳೂರಿನ ನಿವಾಸಿಗಳಿಗೆ ಸಿಹಿ ಸುದ್ದಿ; ಬಡವರಿಗೆ ಸೂರು ಕಲ್ಪಿಸಲು ಯೋಜನೆಯಲ್ಲಿ 1600 ಎಕರೆ ಭೂಮಿ; 1 ಲಕ್ಷ ಗುಂಪು ಮನೆಗಳ ನಿರ್ಮಾಣ..

0
754

ಬೆಂಗಳೂರಿನಲ್ಲಿ ಬಹುತೇಕ ನಿವಾಸಿಗಳಿಗೆ ಇರಲು ಮನೆಯಿಲ್ಲದೆ ಪರದಾಡುವುದು ಗೊತ್ತಿರುವ ವಿಚಾರ, ಇನ್ನು ಬಾಡಿಗೆ ಮನೆ ಹಿಡಿದು ದುಡಿದ ದುಡ್ಡನ್ನೆಲ್ಲ ಬಾಡಿಗೆಗೆ ಕಟ್ಟಿ ಉಳಿದ ಹಣದಲ್ಲಿ ಜೀವನ ನಡೆಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಇಂತಹ ಬಡವರನ್ನು ಪರಿಗಣಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಬೆಂಗಳೂರಿನಲ್ಲಿ ಬಡವರಿಗೆ ಸೂರು ಕಲ್ಪಿಸಲು ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಇದಕ್ಕಾಗಿ 1600 ಎಕರೆ ಭೂಮಿ ಮಂಜೂರು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Also read: ಹವಾ ಎಬ್ಬಿಸಿದ ಮೋದಿ ಸೀರೆಗಳು; ದೇಶದ ತುಂಬೆಲ್ಲ ಮುಗಿ ಬಿದ್ದು ಖರೀಧಿಸುತ್ತಿರುವ ಮಹಿಳೆಯರು; ಸದ್ಯದಲ್ಲೇ ರಾಜ್ಯಕ್ಕೂ ಬರಲ್ಲಿವೆ ಮೋದಿ ಸೀರೆಗಳು..

ಬಡವರಿಗೆ ಸೂರು?

ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಮಾತನಾಡಿ, 94-ಸಿ ಅಡಿಯಲ್ಲಿ 1,11,800 ಜನರಿಗೆ ಈವರೆಗೆ ಹಕ್ಕು ಪತ್ರ ನೀಡಿದ್ದೇವೆ. 81,385 ಜನರಿಗೆ ಹಕ್ಕು ಪತ್ರ ನೀಡಲು ಬಾಕಿ ಇದೆ. 94-ಸಿಸಿ ಅಡಿಯಲ್ಲಿ 45,193 ಫಲಾನುಭವಿಗಳಿಗೆ ಹಕ್ಕು ಪತ್ರ ಹಂಚಿಕೆ ಮಾಡಿದ್ದು, 36,140 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಬಾಕಿ ಇದೆ ಎಂದು ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ 10 ಸಾವಿರ ಹಕ್ಕುಪತ್ರಗಳ ವಿತರಣಾ ಸಮಾರಂಭದಲ್ಲಿ ಅಕ್ರಮ-ಸಕ್ರಮದಡಿ (94ಸಿಸಿ-94ಸಿ) ಅರ್ಹ ಫಲಾನುಭವಿಗಳಿಗೆ ನಿವೇಶನಗಳ ಹಕ್ಕುಪತ್ರ ವಿತರಿಸಿ ಹೇಳಿದ್ದಾರೆ.

ಯಾರಿಗೆ ಸರ್ಕಾರದ ಸೂರು?

Also read: ಮೋದಿ ಸರ್ಕಾರದ ಹೊಸ ಯೋಜನೆಯಿಂದ ಮಾಲಿನ್ಯ ಕಡಿಮೆಯಾಗಲಿದೆ, ರಾಜ್ಯದಲ್ಲೂ ಬರಲಿವೆ ಎಲೆಕ್ಟ್ರಿಕ್ ಬಸ್-ಗಳು!!

ಬಡವರು ಅಂದರೆ ಗಾರ್ಮೆಂಟ್ಸ್‌ ನೌಕರರು, ರಿಕ್ಷಾ ಚಾಲಕರು ಸೇರಿದಂತೆ ಬಡವರ್ಗದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಒಂದು ಲಕ್ಷ ಗುಂಪು ಮನೆಗಳ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಇದಕ್ಕಾಗಿ ಈಗಾಗಲೇ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಬೆಂಗಳೂರಿನ ಹೊರವಲಯದಲ್ಲಿ 1600 ಎಕರೆಯಷ್ಟು ಭೂಮಿಯನ್ನು ಹಸ್ತಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 1 ಲಕ್ಷ ಗುಂಪು ಮನೆಗಳ ನಿರ್ಮಾಣ ಮಾಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಇದಕ್ಕಾಗಿ ಆನ್‌ಲೈನ್‌ ಮೂಲಕ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈ ವರೆಗೆ 48 ಸಾವಿರ ಅರ್ಜಿಗಳು ಬಂದಿವೆ. ಟೆಂಡರ್‌ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಆದಷ್ಟುಬೇಗ ಗುದ್ದಲಿ ಪೂಜೆ ನೆರವೇರಿಸಲಿದ್ದೇವೆ ಎಂದು ಹೇಳಿದ್ದಾರೆ.

ಎಲ್ಲ ಜಾತಿಯ ಬಡವರಿಗೂ ಸೂರು?

ಹಿಂದಿನ ಸರ್ಕಾರ ಗುರುತಿಸಿದ್ದ ಎಲ್ಲ ನಿವೇಶನಗಳ ಹಕ್ಕು ಪತ್ರವನ್ನು ಈಗ ವಿತರಿಸುತ್ತಿದ್ದೇವೆ. 94-ಸಿ ಹಾಗೂ 94-ಸಿಸಿ ಅಡಿಯಲ್ಲಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರವಾಗಿ ಅಕ್ರಮ-ಸಕ್ರಮ ಮಾಡುತ್ತಿದ್ದೇವೆ. ಇಲ್ಲಿ ಜಾತಿಯ ಪ್ರಶ್ನೆ ಇಲ್ಲ, ಎಲ್ಲ ವರ್ಗದ ಬಡವರನ್ನೂ ಸಮಾನವಾಗಿ ಪರಿಗಣಿಸಲಾಗುತ್ತಿದೆ 94-ಸಿ ಅಡಿಯಲ್ಲಿ 1,11,800 ಜನರಿಗೆ ಈವರೆಗೆ ಹಕ್ಕು ಪತ್ರ ನೀಡಿದ್ದೇವೆ. 81,385 ಜನರಿಗೆ ಹಕ್ಕು ಪತ್ರ ನೀಡಲು ಬಾಕಿ ಇದೆ. 94-ಸಿಸಿ ಅಡಿಯಲ್ಲಿ 45,193 ಫಲಾನುಭವಿಗಳಿಗೆ ಹಕ್ಕು ಪತ್ರ ಹಂಚಿಕೆ ಮಾಡಿದ್ದು, 36,140 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಬಾಕಿ ಇದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?

Also read: ನರೇಂದ್ರ ಮೋದಿ ಸರ್ಕಾರದಿಂದ ಕೇಂದ್ರ ನೌಕರರಿಗೆ ಗುಡ್ ನ್ಯೂಸ್: ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ..

ಈಗಾಗಲೇ ಅರ್ಜಿ ಸಲ್ಲಿಸಲು ಅವಕಾಶ ಕೋರಿದೆ ಹಾಗೆಯೇ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು ಮಾ.31ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಂದಿರುವ ಅರ್ಜಿಗಳನ್ನು ನೋಂದಣಿ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಕಾಶವನ್ನು ಎಲ್ಲರು ಸದುಪಯೋಗ ಪಡೆದುಕೊಳ್ಳಲ್ಲಿ ಬಡವರಿಗೆ ಸ್ವಂತ ಮನೆ ಸಿಗಲಿ ಎನ್ನುವ ಯೋಜನೆ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಿ.