ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಬ್ಯಾಂಕ್ ನಲ್ಲಿ ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
462

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ IDBI ಬ್ಯಾಂಕ್ ನೇಮಕಾತಿ 61 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಡಿಸೆಂಬರ್ 12,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಈಶಾನ್ಯ ರೈಲ್ವೆಯಲ್ಲಿ 1104 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: (Name Of The Posts): ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ

ಸಂಸ್ಥೆ (Organisation): ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ ಬ್ಯಾಂಕ್)

ವಿದ್ಯಾರ್ಹತೆ (Educational Qualification): ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಗ್ರಾಜುಯೇಟ್,ಪೋಸ್ಟ್ ಗ್ರಾಜುಯೇಟ್ ಮತ್ತು ಸಿಎ/ಎಂಬಿಎ ಪದವಿಯನ್ನು ಹೊಂದಿರಬೇಕು.

ವಯೋಮಿತಿ: ಹುದ್ದೆಗಳಿಗನುಸಾರ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ತಯಾರಿಸಿ ಗುಂಪು ಚರ್ಚೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 150/-ರೂ ಮತ್ತು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು..

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ ಬ್ಯಾಂಕ್)ನ ಅಧಿಕೃತ ವೆಬ್‌ಸೈಟ್‌ https://www.idbibank.in/index.asp ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://ibpsonline.ibps.in/idbibksnov19/ ಕ್ಲಿಕ್ ಮಾಡಿ.