ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಬ್ಯಾಂಕ್ 115 ಸೆಕ್ಯುರಿಟಿ ಗಾರ್ಡ್ ಕಮ್ ಪೀವನ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಿ ನವೆಂಬರ್ 8,2019 ರ ಒಳಗೆ ಅರ್ಜಿ ಸಲ್ಲಿಸಬೇಕು.
Also read: ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
ಹುದ್ದೆಯ ಹೆಸರು (Name Of The Posts): ಸೆಕ್ಯುರಿಟಿ ಗಾರ್ಡ್ ಕಮ್ ಪೀವನ್
ಸಂಸ್ಥೆ (Organisation): ಇಂಡಿಯನ್ ಬ್ಯಾಂಕ್
ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): November 8, 2019
ವಿದ್ಯಾರ್ಹತೆ: ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ಜುಲೈ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು Objective type ಆನ್ಲೈನ್ ಪರೀಕ್ಷೆ, ಪ್ರಾದೇಶಿಕ ಭಾಷಾ ಪರೀಕ್ಷೆ, ದೈಹಿಕ ಸಾಮರ್ಥ್ಯ, ವಾಹನಾ ಚಾಲನಾ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ವಿಧಾನ: ಅಭ್ಯರ್ಥಿಗಳು ಆನ್ಲೈನ್ನಲ್ಲಿ ಇಂಡಿಯನ್ ಬ್ಯಾಂಕ್ನ ಅಧಿಕೃತ ವೆಬ್ಸೈಟ್ https://www.indianbank.net.in/jsp/startIBPreview.jsp ಗೆ ಭೇಟಿ ನೀಡಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ: https://www.indianbank.net.in/jsp/startIBPreview.jsp ಕ್ಲಿಕ್ ಮಾಡಿ.