ಇಂಡಿಯನ್ ಬ್ಯಾಂಕ್ 138 ವಿಶೇಷ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
290

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಬ್ಯಾಂಕ್ 138 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 10,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ವಿಶೇಷ ಅಧಿಕಾರಿ

ಸಂಸ್ಥೆ (Organisation): ಇಂಡಿಯನ್ ಬ್ಯಾಂಕ್

ವಿದ್ಯಾರ್ಹತೆ (Educational Qualification): ವಿಶೇಷ ಅಧಿಕಾರಿ ಹುದ್ದೆಗಳಿಗೆ ಪದವಿ, ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಜುಲೈ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ವಿಶೇಷ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/-ರಿಂದ 51,490/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.indianbank.net.in/jsp/IBSDisclaimer.jsp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.