ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ತೈಲ ನಿಗಮ (ಐಓಸಿಎಲ್) ನೇಮಕಾತಿ 413 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ. ಆಗಸ್ಟ್ 7,2019ರೊಳಗೆ ಅರ್ಜಿ ಸಲ್ಲಿಸಬೇಕು.
Also read: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) 240 ಪಿಎಸ್ಐ ಮತ್ತು ಆರ್ಎಸ್ಐ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
ಹುದ್ದೆಯ ಹೆಸರು (Name Of The Posts): ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್
ಸಂಸ್ಥೆ (Organisation): ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್)
ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ 10+2 ಅಥವಾ ಐಟಿಐ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): August 7, 2019
ವಯೋಮಿತಿ: ಜುಲೈ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ-ಎನ್ಸಿಎಲ್) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಐಓಸಿಎಲ್ನ ಅಧಿಕೃತ ವೆಬ್ಸೈಟ್ https://www.iocl.com/ ಗೆ ಹೋಗಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 7,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ: https://www.iocl.com/ ಕ್ಲಿಕ್ ಮಾಡಿ.