ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ಡಿಜಿಎಂ,ಚೀಫ್ ರಿಸ್ಕ್ ಮತ್ತು ಕಾಂಪಿಲೆನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಮೇ18,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
ಹುದ್ದೆಯ ಹೆಸರು (Name Of The Posts): ಡಿಜಿಎಂ,ಚೀಫ್ ರಿಸ್ಕ್ ಮತ್ತು ಕಾಂಪಿಲೆನ್ಸ್ ಆಫೀಸರ್
ಸಂಸ್ಥೆ (Organisation): ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ)
ವಿದ್ಯಾರ್ಹತೆ (Educational Qualification): ಚೀಫ್ ರಿಸ್ಕ್ ಕಾಂಪಿಲೆನ್ಸ್ ಆಫೀಸರ್ ಹುದ್ದೆಗಳಿಗೆ ಪದವಿ,ಸಿಎ ಅಥವಾ ಎಂಬಿಎ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮತ್ತು ಡಿಜಿಎಂ (ಇನ್ಫರ್ಮೇಶನ್ ಸೆಕ್ಯುರಿಟಿ) ಹುದ್ದೆಗಳಿಗೆ ಪದವಿ, ಬಿ.ಇ /ಬಿ.ಟೆಕ್ , ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ
ವಯೋಮಿತಿ: ಚೀಫ್ ರಿಸ್ಕ್ ಮತ್ತು ಕಾಂಪಿಲೆನ್ಸ್ ಆಫೀಸರ್ ಹುದ್ದೆಗಳಿಗೆ 38 ರಿಂದ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಡಿಜಿಎಂ (ಇನ್ಫರ್ಮೇಶನ್ ಸೆಕ್ಯುರಿಟಿ) ಹುದ್ದೆಗಳಿಗೆ 35 ರಿಂದ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 68,680/- ರಿಂದ 76,520/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಗುಂಪು ಚರ್ಚೆ, ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅಭ್ಯರ್ಥಿಗಳು 750/-ರೂ ಅನ್ನು ಆನ್ಲೈನ್ ಮೂಲಕ ಮೇ 18,2019ರೊಳಗೆ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.ippbonline.com/ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ
ಶುಲ್ಕವನ್ನು ಪಾವತಿಸುವ ಮೂಲಕ ಮೇ18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1jjHYkE0jIDKRQUTFgD17USrNZwXcLoaE/view ಕ್ಲಿಕ್ ಮಾಡಿ.