ಇದೇ ಫೆ.13ಕ್ಕೆ ಅಖಂಡ ಕರ್ನಾಟಕ ಬಂದ್ ; 500ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ, ಓಲಾ, ಊಬರ್, ಟ್ಯಾಕ್ಸಿ, ಲಾರಿ, ಆಟೋ ಸೇವೆ ಇರೋದಿಲ್ಲ.!

0
459

ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗದೆ ಇರುವುದಕ್ಕೆ ವಿರೋದ್ಧಿಸಿ, ಫೆಬ್ರವರಿ 13ಕ್ಕೆ ಕರ್ನಾಟಕ ಬಂದ್ ಗೆ ಕರೆನಿಡಿದ್ದು, ಕನ್ನಡ ಚಳವಳಿಯ ನಾಗೇಶ್ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ. ಜಯ ಕರ್ನಾಟಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಲಾರಿ ಮಾಲೀಕರ ಸಂಘ, ಸಿಐಟಿಯು ಮೊದಲಾದ ಸಂಘಟನೆಗಳೂ ಸೇರಿ ಅಖಂಡ ಕರ್ನಾಟಕ ಫೆ. 13 ರಂದು ಮುಷ್ಕರಕ್ಕೆ ಕರೆ ನೀಡಿದೆ. ಈ ಹಿನೆಲ್ಲೆಯಲ್ಲಿ ಓಲಾ, ಊಬರ್, ಟ್ಯಾಕ್ಸಿ, ಲಾರಿ, ಆಟೋ ಸೇವೆಗಳು ಇರುವುದಿಲ್ಲ ಎನ್ನಲಾಗಿದೆ.

ಏನಿದು ಹೋರಾಟ?

ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಕೊಡಬೇಕೆಂದು ಹೇಳುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಫೆಬ್ರವರಿ 13ರಂದು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ರಾಜ್ಯದ ಪ್ರತಿಯೊಬ್ಬರು ಕೂಡ ಸ್ವಯಂಪ್ರೇರಿತವಾಗಿ ಬಂದ್​ಗೆ ಸಹಕಾರ ನೀಡುವಂತೆ ಸಂಘಟನೆಗಳು ಮನವಿ ಮಾಡಿಕೊಂಡಿವೆ. ಕನ್ನಡ ಚಳವಳಿಯ ನಾಗೇಶ್ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ. ಜಯ ಕರ್ನಾಟಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಲಾರಿ ಮಾಲೀಕರ ಸಂಘ, ಸಿಐಟಿಯು ಮೊದಲಾದ ಸಂಘಟನೆಗಳೂ ಫೆ. 13ರ ಬಂದ್​ಗೆ ಬೆಂಬಲ ಸೂಚಿಸಿವೆ.

ಅಂದು ಬೆಳಗ್ಗೆ 11 ಘಂಟೆಗೆ ಟೌನ್ ಹಾಲ್‍ನಿಂದ ಫ್ರೀಡಂಪಾರ್ಕ್ ತನಕ ಬೃಹತ್ ರ‍್ಯಾಲಿ ಮಾಡಲಾಗುತ್ತೆ. ವರದಿ ಜಾರಿಗೆ ಆಗ್ರಹಿಸಿ ನಗರದ ಮೌರ್ಯ ಸರ್ಕಲ್ ಬಳಿ ಕಳೆದ 96 ದಿನಗಳಿಂದ ಧರಣಿ ನಡೆಸಲಾಗುತ್ತಿದೆ. ಆದರೆ ಇದುವರೆಗೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಹೀಗಾಗಿ ಇದೇ 13ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.

ಏನಿದು ಸರೋಜಿನಿ ಮಹಿಷಿ ವರದಿ?

ಕನ್ನಡಿಗರಿಗೆ ಎಷ್ಟು ಪ್ರಾಶಸ್ತ್ಯ ಸಿಗಬೇಕೆಂದು ತಿಳಿಸಲು ಮಾಜಿ ಕೇಂದ್ರ ಸಚಿವೆ ಸರೋಜಿನಿ ಮಹಿಷಿ ನೇತೃತ್ವದಲ್ಲಿ 1983ರಲ್ಲಿ ರಾಮಕೃಷ್ಣ ಹೆಗಡೆ ನೇತೃತ್ವದ ಸರ್ಕಾರವು ಕರ್ನಾಟಕದಲ್ಲಿ ಸಮಿತಿ ರಚಿಸಿತ್ತು. ಗೋಪಾಲಕೃಷ್ಣ ಅಡಿಗ ಮೊದಲಾದ 4 ಮಂದಿ ಇದ್ದ ಈ ಸಮಿತಿ 1986ರಲ್ಲಿ ಅಂತಿಮ ವರದಿ ಸಲ್ಲಿಸಿತು. ಒಟ್ಟು 58 ಶಿಫಾರಸುಗಳನ್ನು ಮಾಡಿತು. ಇದರಲ್ಲಿ ರಾಜ್ಯ ಸರ್ಕಾರ 40 ಶಿಫಾರಸುಗಳನ್ನು ಒಪ್ಪಿಕೊಂಡಿದೆ. ಉಳಿದ ಹಲವು ಪ್ರಮುಖ ಶಿಫಾರಸುಗಳು ಇನ್ನೂ ಗಗನಕುಸುಮವಾಗಿಯೇ ಉಳಿದಿವೆ. ಮಹಿಷಿಯವರು ನೀಡಿದ ವರದಿಯು ಸರೋಜಿನಿ ಮಹಿಷಿ ವರದಿ ಎಂದೇ ಖ್ಯಾತವಾಗಿದ್ದು.

ಕರ್ನಾಟಕದಲ್ಲಿ ನ್ಯಾಯವಾಗಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ದೊರೆಯಬೇಕೆಂಬುದ್ದನ್ನು ಈ ವರದಿ ಪ್ರತಿಪಾದಿಸುತ್ತೆ. ಈ ವರದಿ ಇಂದಿಗೂ ಕನ್ನಡ ಮತ್ತು ಕರ್ನಾಟಕ ಪರ ಹೋರಾಟಗಳಿಗೆ ಆಧಾರವಾಗಿದೆ. 1986ರಲ್ಲೇ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಕನ್ನಡಿಗರಿಗೆ ಮೊದಲು ಉದ್ಯೋಗ ಅವಕಾಶ ಕಲ್ಪಿಸಿಕೊಡಬೇಕು ಎಂದು ವರದಿಯಲ್ಲಿತ್ತು. ಐಟಿ, ಬಿಟಿ ಸೇರಿದಂತೆ ರಾಜ್ಯದ ಎಲ್ಲಾ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವುದೂ ಸೇರಿ 14 ಪ್ರಮುಖ ಶಿಫಾರಸುಗಳನ್ನು ಒಳಗೊಂಡಿದೆ. ಆದರೆ ಯಡಿಯೂರಪ್ಪ ಸರ್ಕಾರ ರಾಜ್ಯದಲ್ಲಿ ಕನ್ನಡಿಗರಿಗೆ ಶೇ. 75ರಷ್ಟು ಉದ್ಯೋಗ ಮೀಸಲಾತಿ ಕೊಡುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಹೋರಾಟ ನಡೆಯುತ್ತಿದೆ.