ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ; ವೈದ್ಯಕೀಯ ವೆಚ್ಚ ಮರುಪಾವತಿ ಮಿತಿ 3 ಲಕ್ಷ ರೂ. ಗೆ ಹೆಚ್ಚಳ ಮಾಡಿ ಹಲವು ಬದಲಾವಣೆ ತಂದ ಸರ್ಕಾರ..

0
818

ರಾಜ್ಯ ಸರ್ಕಾರ ತನ್ನ ನೌಕರರ ಮೇಲೆ ಹೆಚ್ಚಿನ ಕಾಳಜಿವಹಿಸುತ್ತಿದ್ದು ಮತ್ತೊಂದು ಬಂಪರ್ ಆಪರ್ ನೀಡಿದೆ. ಇದರಿಂದ ಆಸ್ಪತ್ರೆ ಕರ್ಚಿಗೆ ಅನುಕೂಲವಾಗುವಂತೆ ಹಲವು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲು ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಯವರಿಗೆ ಅಧಿಕಾರ ನೀಡಿರುವ ಅರ್ಹತಾ ಮೊತ್ತದ ಮಿತಿಯನ್ನು 2 ಲಕ್ಷ ರೂಗಳಿಂದ 3 ಲಕ್ಷ ರೂಗೆ ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ನೌಕರರಲ್ಲಿ ಮಂದಹಾಸ ಮೂಡಿದೆ.

Also read: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಆಫರ್; ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನಗದು ರಹಿತ ಹೆಚ್ಚುವರಿ ಚಿಕಿತ್ಸೆಗೆ ರಾಜ್ಯ ಆರೋಗ್ಯ ಇಲಾಖೆ ಆದೇಶ..

ಹೌದು ಸರ್ಕಾರಿ ನೌಕರರು ಮಾನ್ಯತೆ ಹೊಂದಿರದ ರಾಜ್ಯದ ಹಾಗೂ ಹೊರ ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲು ಈ ಮಾನತೆಯನ್ನು ಮಾಡಿದ್ದು, ಪ್ರಸ್ತುತ ದುಬಾರಿಯಾದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಮಾನ್ಯತೆ ಪಡೆಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಅರ್ಹತಾ ಮೊತ್ತ 2 ಲಕ್ಷ ರೂ.ಗಳನ್ನು ಮೀರಿದ ಮರುಪಾವತಿ ಪ್ರಕರಣಗಳು ನಿಯಮ ಸಡಿಲಿಕೆಗಾಗಿ, ಆಡಳಿತ ಇಲಾಖೆಗಳ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಬರುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇದರಿಂದ ವೈದ್ಯಕೀಯ ವೆಚ್ಚದ ಮರುಪಾವತಿಯು ವಿಳಂಬವಾಗಿ ಸರ್ಕಾರಿ ನೌಕರರಿಗೆ ತೊಂದರೆಯಾಗುತ್ತಿದೆ. ಎನ್ನುವ ದೂರಿನ ಹಿನ್ನಲೆಯಲ್ಲಿ ಅವಕಾಶ ನೀಡಿದ್ದು,
2 ಲಕ್ಷ ರೂ.ಗಳವರೆಗಿನ ಅಧಿಕಾರ ಮಿತಿಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಆದೇಶ ಹೊರಡಿಸಿದ ದಿನಾಂಕದ ನಂತರ ಚಿಕಿತ್ಸೆ ಪಡೆದಿರುವ ಪ್ರಕರಣಗಳಿಗೆ ಮಾತ್ರ ಇದು ಅನ್ವಯವಾಗಲಿದೆ. ಅರ್ಹತಾ ಮೊತ್ತ 3 ಲಕ್ಷ ರೂ.ಗಳನ್ನು ಮೀರಿದ ಹಾಗೂ 5 ಲಕ್ಷ ರೂ.ವರೆಗಿನ ಮರುಪಾವತಿ ಪ್ರಕರಣಗಳನ್ನು ಇಲಾಖಾ ಮುಖ್ಯಸ್ಥರು, ತಮ್ಮ ನಿರ್ದಿಷ್ಟ ಶಿಫಾರಸ್ಸಿನೊಂದಿಗೆ ಪ್ರಸ್ತಾವನೆಗಳನ್ನು ನೇರವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸದೆ ಸಂಬಂಧಪಟ್ಟ ಸಚಿವಾಲಯದ ಇಲಾಖಾ ಕಾರ್ಯದರ್ಶಿ ಸಲ್ಲಿಸಬೇಕು. ಇದೇ ರೀತಿ 5 ಲಕ್ಷ ರೂ.ಮೀರಿದ ಹಾಗೂ ಇನ್ನಿತರ ನಿಯಮಗಳ ಸಡಿಲಿಕೆ ಪ್ರಕರಣಗಳನ್ನು ಪರಿಶೀಲಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಮೂಲಕ ಮುಖ್ಯಮಂತ್ರಿ ಅವರ ಆದೇಶಕ್ಕಾಗಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Also read: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಭತ್ಯೆಯಲ್ಲಿ 5 ಪಟ್ಟು ಹೆಚ್ಚಳ..

ಕೆಲವು ದಿನಗಳ ಹಿಂದೆವೂ ಸರ್ಕಾರಿ ನೌಕರರಿಗೆ ಬಂಪರ್ ಆಫರ್ ಒಂದನ್ನು ನೀಡಿ ಗಂಭೀರ ಹಾಗೂ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾದ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರಿಗೆ ನೋಂದಾಯಿತ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನಗದು ರಹಿತ ತೃತೀಯ ಹಂತದ ಆರೋಗ್ಯ ಸೇವೆ ಒದಗಿಸುವ ‘ಜ್ಯೋತಿ ಸಂಜೀವಿನಿ’ ಯೋಜನೆಗೆ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಒದಗಿಸುತ್ತಿರುವ ಹೆಚ್ಚುವರಿ ಚಿಕಿತ್ಸಾ ವಿಧಾನಗಳನ್ನೂ ಸೇರಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ.
ಈ ಮೂಲಕ 2014ರಿಂದ ‘ಜ್ಯೋತಿ ಸಂಜೀವಿನಿ’ ಯೋಜನೆಯಡಿ ತೃತೀಯ ಹಂತದ 449 ಗಂಭೀರ ಹಾಗೂ ಮಾರಣಾಂತಿಕ ಕಾಯಿಲೆಗಳ ಚಿಕಿತ್ಸೆ , 50 ತುರ್ತು ಚಿಕಿತ್ಸಾ ವಿಧಾನದ ಸೇವೆ ಪಡೆಯುತ್ತಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಬಂಪರ್‌ ಕೊಡುಗೆ ನೀಡಿದೆ. ಇನ್ನು ಮುಂದೆ ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ ಗುರುತಿಸಿರುವ 900 ತೃತೀಯ ಹಂತದ ಚಿಕಿತ್ಸಾ ವಿಧಾನ ಹಾಗೂ 169 ತುರ್ತು ಚಿಕಿತ್ಸಾ ವಿಧಾನಗಳನ್ನು ‘ಜ್ಯೋತಿ ಸಂಜೀವಿನಿ’ ಯೋಜನೆಯಡಿ ನಗದು ರಹಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.