ಕರ್ನಾಟಕದ ಪ್ರವಾಹಕ್ಕೆ ಮಿಡಿಯದ ಮೋದಿ ಸರ್ಕಾರ? ರಾಜ್ಯದ ತುಂಬೆಲ್ಲ ಸರ್ಕಾರ ವಿರುದ್ಧ ಜನರ ಆಕ್ರೋಶ..

0
282

ಕರ್ನಾಟಕವೇ ಪ್ರವಾಹದಲ್ಲಿ ಸಿಲಿಕ್ಕಿದ್ದು, ಸಹಾಯಕ್ಕಾಗಿ ಕೈ ಚಾಚಿದೆ, ರಾಜ್ಯ ರಾಜ್ಯಸರ್ಕಾರದಿಂದ ಪರಿಹಾರ ನೀಡಲು ಸಾಕಾಗುವಷ್ಟು ಹಣವಿಲ್ಲದಾಗಿದೆ. ಇದರಿಂದ ಕೇಂದ್ರ ಸರ್ಕಾರ ಸುಮಾರು 5 ಸಾವಿರ ಕೋಟಿ ಹಣವನ್ನು ನೀಡಬೇಕು ಎಂದು ಎನ್ನುವುದು ಎಲ್ಲರ ಮನವಿಯಾಗಿತ್ತು, ಅದರಂತೆ ಇಂದು ನಡೆದ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ರಾಜ್ಯದ ಪ್ರವಾಹಕ್ಕೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಇದರಿಂದ ಕೇಂದ್ರದ ಸಹಾಯ ಹಸ್ತದ ನಿರೀಕ್ಷಯಲ್ಲಿದ್ದ ಜನರಿಗೆ ನಿರಾಸೆ ಮೂಡಿದೆ.

ಕರ್ನಾಟಕದ ಕಣ್ಣಿರಿಗಿಲ್ಲ ಮೋದಿ ಹಣ?

ರಾಜ್ಯ ಪ್ರವಾಹಕ್ಕೆ ತುತ್ತಾಗಿದ್ದು, ಜನರು ಮನೆ ಮಠ ಕಳೆದುಕೊಂಡು ಸಂತ್ರಸ್ತರ ಕೇಂದ್ರ ಸೇರಿದ್ದಾರೆ. ಅವರಿಗೆ ಪುನರ್ವಸತಿ ಕಲ್ಪಿಸುವ ಜೊತೆಗೆ ಹೊಸ ಬದುಕು ಕಟ್ಟಿಕೊಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ರಾಜ್ಯದಲ್ಲಿ ಈಗಾಗಲೇ ಮಳೆಗೆ 30 ಸಾವಿರ ಕೋಟಿ ಹಾನಿ ಸಂಭವಿಸಿದ್ದು, ಕೇಂದ್ರದಿಂದ ಮೊದಲ ಹಂತದಲ್ಲಿ 3000 ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕೋರಿದೆ. ಆದರೆ ಇಂದು ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ಚರ್ಚೆ ನಡೆಯದಿರುವುದು ಹಾಗೂ ತುರ್ತು ಕಾರ್ಯಕ್ಕಾಗಿ ಕೇಂದ್ರ ಸರ್ಕಾರ ಪರಿಹಾರ ಘೋಷನೆ ಮಾಡದಿರುವ ನಡೆಯ ಬಗ್ಗೆ ಕರ್ನಾಟಕ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸಚಿವರು ಕ್ಯಾಬಿನೇಟ್ ಸಭೆಯಲ್ಲಿ ಭಾಗವಹಿಸಿದ್ದರೂ ಕೂಡ ಕೇಂದ್ರ ಸರ್ಕಾರದ ಪ್ರವಾಹ ಪರಿಸ್ಥಿತಿಗೆ ಯಾವುದೇ ಪರಿಹಾರ ನೀಡಲು ತೀರ್ಮಾನವನ್ನು ಕೈಗೊಂಡಿರಲಿಲ್ಲ. ಆದರೆ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಕನಿಷ್ಠ 5 ಸಾವಿರ ಕೋಟಿ ರೂ.ಗಳನ್ನ ಪರಿಹಾರವಾಗಿ ನೀಡುವ ನಿರೀಕ್ಷೆಯನ್ನು ರಾಜ್ಯದ ಜನತೆ ಮಾಡಿದ್ದರು. ಆದರೆ ಈ ಬಗ್ಗೆ ಯಾವುದೇ ತೀರ್ಮಾನವನ್ನು ಸಂಪುಟ ಸಭೆಯಲ್ಲಿ ಕೈಗೊಂಡಿಲ್ಲ ಎಂಬ ಮಾಹಿತಿ ಲಭಿಸಿದೆ. ಭಾನುವಾರ ಪ್ರವಾಹ ಪರಿಶೀಲನೆ ನಡೆಸಿದ ಗೃಹ ಸಚಿವ ಅಮಿತ್​ ಷಾ ರಾಜ್ಯದ ಸ್ಥಿತಿಗತಿ ಅರಿತ ಅವರು ನೆರವಿಗೆ ಮುಂದಾಗುತ್ತಾರೆ ಎಂಬ ಭರವಸೆ ಮೂಡಿತು. ಅಲ್ಲದೇ ಇಂದು ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಕ್ಕೆ ವಿಶೇಷ ಪ್ಯಾಕೇಜ್​ ಘೋಷಣೆ ಮಾಡುವ ಭರವಸೆಯನ್ನು ರಾಜ್ಯ ಹೊಂದಿತ್ತು. ಆದರೆ, ಈ ಭರವಸೆ ಹುಸಿಕೊಂಡಿದೆ.

ಈ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ಗೋ. ಮಸೂದನ್ ಅವರು, ರಾಜ್ಯ ಸರ್ಕಾರದಿಂದ ಯಾವ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂಬ ಬಗ್ಗೆ ಮಾಹಿತಿ ನೀಡಬೇಕಿತ್ತು. ಈ ಬಗ್ಗೆ ಸರ್ಕಾರ ಮಾಹಿತಿ ನೀಡಿದ್ದು, 2 ದಿನಗಳಲ್ಲಿ ಪರಿಹಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಕೇಂದ್ರವೂ ಬಗ್ಗೆ ಮಾಹಿತಿ ಪಡೆದಿದೆ ಎಂದರು. ಇತ್ತ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಪ್ರಧಾನಿಗಳಿಗೆ ಹಾಗೂ ಸಂಪುಟ ಸಭೆಯಲ್ಲಿ ರಾಜ್ಯ ಪ್ರವಾಹ ಬಗ್ಗೆ ಮಾಹಿತಿ ನೀಡಿದ್ದೇನೆ. ಸಭೆಯಲ್ಲೂ ಕೂಡ ಈ ಬಗ್ಗೆ ಪ್ರಸ್ತಾಪ ಮಾಡಿದೆ. ಕೇಂದ್ರ ಸರ್ಕಾರದಿಂದ ಸಿಗಬೇಕಾದ ಎಲ್ಲಾ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು. ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ರಾಜ್ಯದ ಪರಿಸ್ಥಿತಿ ಬಗ್ಗೆ ಪ್ರಧಾನಿ ಮಾಹಿತಿ ಪಡೆದಿದ್ದಾರೆ. ಜೊತೆ ಅಮಿತ್ ಶಾ, ನಿರ್ಮಲಾ ಸೀತಾರಾಮನ್​ರಿಂದಲೂ ಮಾಹಿತಿ ಸಂಗ್ರಹಿಸಲಾಗಿದ್ದು, ಎಲ್ಲ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.