ಬಿಗ್ ಬ್ರೇಕಿಂಗ್; ಮಂಗಳೂರು ಏರ್​ಪೋರ್ಟ್​ನಲ್ಲಿ ಪತ್ತೆಯಾಯ್ತು ಸಜೀವ ಬಾಂಬ್; ಇಂಡಿಗೋ ವಿಮಾನದಲ್ಲೂ ಬಾಂಬ್ ಇದೇ ಎನ್ನುವ ಬೆದರಿಕೆ ಕರೆ.!

0
320

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಇಡಿ ರಾಜ್ಯವನ್ನೇ ನಡುಗಿಸಿದೆ, ಲ್ಯಾಪ್ ಟ್ಯಾಪ್ ಬ್ಯಾಗೊಂದು ಅನುಮಾನಸ್ಪದವಾಗಿ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಇದು ಪತ್ತೆಯಾಗಿತ್ತು. ಬಾಂಬ್ ಪತ್ತೆಯಾದ ಕೂಡಲೇ ಎಚ್ಚೆತ್ತ ಸಿಬ್ಬಂದಿ, ವಿಮಾನ ನಿಲ್ದಾಣದಲ್ಲಿನ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ತುಂಬೆಲ್ಲ ತಪಾಷಣೆ ನಡೆಸಿದ್ದಾರೆ ಇತ್ತ ಮಂಗಳೂರಿನಿಂದ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಕರೆಯೊಂದು ಬಂದಿದೆ. ವಿಮಾನ ತಪಾಷಣೆ ವೇಳೆ ಮತ್ತೊಂದು ಅನುಮಾನಸ್ಪಂದ ಬ್ಯಾಗ್ ಪತ್ತೆಯಾಗಿದ್ದು ತಪಾಷಣೆ ನಡೆಸಿದ್ದಾರೆ.

ಹೌದು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಓರ್ವ ಆಟೋ ಚಾಲಕ ಒಂದು ಸಜೀವ ಬಾಂಬ್ ಇದ್ದ ಲ್ಯಾಪ್​ಟಾಪ್​ ಬ್ಯಾಗ್ ಅನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದಾನೆ. ಆದರೆ, ಈ ಬ್ಯಾಗ್​ನಲ್ಲಿ ಸಜೀವ ಬಾಂಬ್ ಇರುವುದು ನಂತರ ಪತ್ತೆಯಾಗಿದೆ. ಹೀಗಾಗಿ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ನಗರದ ಪೊಲೀಸ್ ಆಯುಕ್ತ ಡಾ.ಹರ್ಷ ಸ್ಥಳಕ್ಕೆ ಆಗಮಿಸಿ ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಈಗಾಗಲೇ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ತುರ್ತಾಗಿ ಮಂಗಳೂರಿಗೆ ತೆರಳಿ ಬಾಂಬ್ ನಿಷ್ಕ್ರಿಯಗೊಳಿಸಿದ್ದಾರೆ.

ಈ ವೇಳೆ ಮತ್ತೊಂದು ಅಪರಿಚಿತ ಕರೆ ಬಂದ ಹಿನ್ನೆಲಯಲ್ಲಿ ಹೈದ್ರಾಬಾದ್​ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪರೀಕ್ಷಿಸಿ ನೋಡಿದ್ದಾಗ ಮತ್ತೊಂದು ಬಾಂಬ್​ ಪತ್ತೆಯಾಗಿದೆ. ಮೊದಲ ಬಾಂಬ್​ ನಿಷ್ಕ್ರಿಯ ಮಾಡುತ್ತಿರುವ ಕೆಂಜಾರ್​ ಮೈದಾನಕ್ಕೆ ಈ ಬಾಂಬನ್ನೂ ಹೊತ್ತೊಯ್ದು ನಿಷ್ಕ್ರಿಯಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದರ ಹಿಂದೆ ಇನ್ನೊಂದು ಬಾಂಬ್​ ಸಿಕ್ಕ ಹಿನ್ನೆಲೆಯಲ್ಲಿ ಭದ್ರತೆಯನ್ನು ಇಮ್ಮಡಿಗೊಳಿಸಲಾಗಿದೆ. ಜತೆಗೆ ಮಂಗಳೂರಿಗೆ ಹೆಚ್ಚಿನ ಬಾಂಬ್​ ಡಿಫ್ಯೂಸ್​ ಸಿಬ್ಬಂದಿ ಕಳಿಸಲಾಗುತ್ತಿದೆ.

3

ವಿಮಾನ ನಿಲ್ದಾಣದಿಂದ ಸುಮಾರು 500 ಮೀಟರ್ ನಷ್ಟು ದೂರದಲ್ಲಿ ಇದನ್ನು ಇರಿಸಲಾಗಿದ್ದು, ಈ ಭಾಗಕ್ಕೆ ಯಾರಿಗೂ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ. ಪ್ರಯಾಣಿಕರ ಸುರಕ್ಷಿತೆಯ ದೃಷ್ಟಿಯಿಂದ ವಿಮಾನ ನಿಲ್ದಾಣಕ್ಕೆ ಬರುವ ದಾರಿಯನ್ನು ಬದಲಾವಣೆ ಮಾಡಲಾಗಿದೆ. ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವಿಮಾನ ಸಂಚಾರ ಎಂದಿನಂತೆ ನಡೆಯುತ್ತಿದೆ ಎನ್ನಲಾಗಿದೆ. ಘಟನೆಯಿಂದಾಗಿ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ಎಲ್ಲಾ ವಾಹನಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ.

ಬಾಂಬ್ ಇಟ್ಟವರು ಯಾರು?

ಬೆಂಗಳೂರು ಸೇರಿದಂತೆ ಇತ್ತೀಚೆಗೆ ಅನೇಕ ಕಡೆಗಳಲ್ಲಿ ಉಗ್ರರನ್ನು ಬಂಧಿಸಲಾಗಿತ್ತು. ಇದಲ್ಲದೆ ಜನವರಿ 26 ಗಣರಾಜ್ಯೋತ್ಸವ ಹತ್ತರವಾಗುತ್ತಿದ್ದು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ಸಲುವಾಗಿ ಉಗ್ರರು ಇಂತಹ ಕೃತ್ಯಕ್ಕೆ ಕೈ ಹಾಕಿದ್ದಾರ? ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಮತ್ತೊಂದು ಕೋನದಲ್ಲೂ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಉಗ್ರರು ನಗರದಲ್ಲಿ ಬೀಡುಬಿಟ್ಟಿದ್ದು, ತಮ್ಮ ಸಂಘಟನೆಯ ಶಕ್ತಿಯನ್ನು ತೋರ್ಪಡಿಸುವ ಸಲುವಾಗಿ ಉದ್ದೇಶ ಪೂರ್ವಕವಾಗಿ ವಿಮಾನ ನಿಲ್ದಾಣದಲ್ಲಿ ಸಂಪರ್ಕ ಕಡಿತ ಮಾಡಿದ ಬಾಂಬ್​ ಇಡಲಾಗಿದೆಯೇ? ಅಥವಾ ಅವರ ವಿಧ್ವಂಸಕ ಕೃತ್ಯ ಕೂದಲೆಳೆಯಲ್ಲಿ ತಪ್ಪಿತೇ? ತನಿಖೆ ನಡೆಯುತ್ತಿದೆ. ಒಟ್ಟಾರೆಯಾಗಿ ರಾಜ್ಯದ ಮೇಲೆ ಉಗ್ರರ ನೆರಳು ಬಿದ್ದಿರುವುದು ನೀಜವಾಗಿದೆ.