ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಗಣಿತ ಕಿಟ್‌; ಉತ್ತರ ಕರ್ನಾಟಕದ ಮಾದರಿ ಅನುಸರಿಸಿದ ರಾಜ್ಯ ಸಚಿವ ಸಂಪುಟದ ವಿವಿಧ ಅನುಮೊದನೆಗಳು..

0
572

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಮಂದಿ ಗಣಿತ ವಿಷಯದಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಅವರಿಗೆ ಗಣಿತದ ಬಗ್ಗೆ ಸೂಕ್ತ ತರಬೇತಿ ನೀಡಲು ಉತ್ತರ ಕರ್ನಾಟಕ ಭಾಗದಲ್ಲಿ ನೀಡಿದ್ದ ಗಣಿತ ಕಿಟ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಗಣಿತ ಕಿಟ್‌ನ್ನು ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ವಿತರಿಸಲು ಕ್ರಮ ಕೈಗೊಳ್ಳಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಅಷ್ಟೇ ಅಲ್ಲದೆ ಹಲವು ವಿವಿಧ ಯೋಜನೆಗಳನ್ನು ಜಾರಿಗೆ ಮಾಡಿದೇ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಸರ್ವ ಶಿಕ್ಷಣ ಅಭಿಯಾನ ಬದಲಾವಣೆ?

ಈ ಹಿಂದೆ ಕೇಂದ್ರ ಸರ್ಕಾರವು ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದಿರುವ ಮಾಧ್ಯಮಿಕ ಶಿಕ್ಷಣ ಅಭಿಯಾನ ಹಾಗೂ ಸರ್ವ ಶಿಕ್ಷಣ ಅಭಿಯಾನವನ್ನು ವಿಲೀನಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಎರಡೂ ವಿಲೀನಗೊಳಿಸಿ ಸಮಗ್ರ ಶಿಕ್ಷಣ ಕರ್ನಾಟಕ ಟ್ರಸ್ಟ್‌ ಹೆಸರಿನಲ್ಲಿ ಮುನ್ನಡೆಸಲಾಗುವುದು. ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ 28 ವಸತಿ ಶಾಲೆಗಳ ಕಟ್ಟಡಗಳನ್ನು ನಿರ್ಮಾಣ ಮಾಡಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಇದರಲ್ಲಿ 24 ಹಾಲಿ ಪ್ರೌಢ ಶಾಲೆಗಳನ್ನು ಪಿಯುಸಿ ಶಿಕ್ಷಣ ನೀಡಲು ಮೇಲ್ದರ್ಜೆಗೇರಿಸಿ ಅಗತ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು. ಉಳಿದಂತೆ 4 ವಸತಿ ಕಾಲೇಜು ಕಟ್ಟಡಗಳನ್ನು ನೂತನವಾಗಿ ನಿರ್ಮಿಸಲಾಗುವುದು. 28 ವಸತಿ ಶಾಲೆಗಳ ಪೈಕಿ 16 ಉತ್ತರ ಕರ್ನಾಟಕ ಭಾಗದಲ್ಲಿದ್ದು, 12 ಇತರೆ ಭಾಗದಲ್ಲಿರಲಿವೆ. ಇವುಗಳಿಗಾಗಿ 700 ಕೋಟಿ ರು.ಗೆ ಒಪ್ಪಿಗೆ ನೀಡಲಾಗಿದೆ.

ಸಂಪುಟದಲ್ಲಿ ವಿವಿಧ ಅನುಮೋದನೆಗಳು:

1. ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂದಿಸಿದಂತೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಮೂಲಭೂತ ಸೌಕರ್ಯ ಕಲ್ಪಿಸಲು 29 ಕೋಟಿ ರು.
2. ಮೈಸೂರು ವೈದ್ಯಕೀಯ ಕಾಲೇಜಿಗೆ 67 ಕೋಟಿ ರು. ನೀಡಲು ಅನುಮೋದನೆ ನೀಡಲಾಗಿದೆ.
ಮೈಸೂರಿನಲ್ಲಿ ಸಿಲ್ಕ್ ಮೆಗಾ ಕ್ಲಸ್ಟರ್‌:
3. ಅಲ್ಲದೆ, ಮೈಸೂರಿನಲ್ಲಿ ಚಾಮುಂಡೇಶ್ವರಿ ಸಿಲ್ಕ್‌ ಮೆಗಾ ಕ್ಲಸ್ಟರ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಶೇಷ ಉದ್ದೇಶ ವಾಹಕ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ.
4. ಬೆಳವಾಡಿ ಹತ್ತಿರ 10 ಎಕರೆ ವ್ಯಾಪ್ತಿಯಲ್ಲಿ ಸ್ಥಾಪನೆಯಾಗಲಿರುವ ಮೆಗಾ ಕ್ಲಸ್ಟರ್‌ಗೆ ಸರ್ಕಾರ 49 ಕೋಟಿ ರು. ಬಂಡವಾಳ ಹೂಡಲಿದೆ ಎಂದು ಸಚಿವರು ತಿಳಿಸಿದರು.
5. ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ವತಿಯಿಂದ ನೆಲಮಂಗಲದ ಟಿ. ಬೇಗೂರು ಬಳಿ ನಿರ್ಮಿಸಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಯ ನೀಲನಕ್ಷೆ ಪಡೆಯಲು ನಗರ ಯೋಜನಾ ವಿಭಾಗದಿಂದ ಘಟನೋತ್ತರ ಅನುಮತಿ ನೀಡಿದ ಸಚಿವ ಸಂಪುಟ .
6. ಮೈಸೂರಿನ ಎನ್‌ಐಎ ಕಾಲೇಜಿಗೆ ವಿಶ್ವವಿದ್ಯಾಲಯ ಮಾನ್ಯತೆ ನೀಡಲು ಕರಡು ವಿಧೇಯಕಕ್ಕೆ ಅನುಮತಿ ನೀಡಲು ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗಿದೆ.
7. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಹಾಗೂ ಮದ್ದೂರು ತಾಲೂಕುಗಳಲ್ಲಿ 196 ಕೋಟಿ ರು. ವೆಚ್ಚದಲ್ಲಿ ಆರು ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಅಂಗೀಕಾರ ನೀಡಿದೆ.
8. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಆನೆಕೆರೆಗೆ ಸುತ್ತಮುತ್ತಲಿನ ಹಳ್ಳಿಗಳಿಗೆ ಹೇಮಾವತಿಯಿಂದ ಕುಡಿಯುವ ನೀರು ಪೂರೈಸಲು 28 ಕೋಟಿ ರು.
9. ಬೆಸಗರಹಳ್ಳಿಯ ಹಾಗೂ 37 ಗ್ರಾಮಗಳಿಗೆ 34 ಕೋಟಿ ರು. ವೆಚ್ಚದಲ್ಲಿ, ಕೊಪ್ಪ ಸುತ್ತಮುತ್ತಲಿನ 49 ಗ್ರಾಮಗಳಿಗೆ 28 ಕೋಟಿ ರು. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕೈಗೊಳ್ಳಲು ಅಂಗೀಕಾರ ನೀಡಲಾಗಿದೆ ಎಂದು ಸಚಿವ ಸಂಪುಟ ತಿಳಿಸಿದೆ.

Also read: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರೂ, ಮೂಗಿಗೆ ಪೈಪ್ ಹಾಕಿಕೊಂಡೇ ಬಜೆಟ್ ಮಂಡಿಸಿದ ಪಾರಿಕರ್!! ಇವರ ಕಾರ್ಯಕ್ಷಮತೆ ಮೆಚ್ಚಲೇಬೇಕು…