ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಆಗಸ್ಟ್ 28, 2019 ರ ಒಳಗೆ ಅರ್ಜಿ ಸಲ್ಲಿಸಬೇಕು.
Also read: ಹಾಸನ ಜಿಲ್ಲೆಯಲ್ಲಿ ಹಲವಾರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
ಹೆದ್ದೆಯ ಹೆಸರು (Name Of The Posts): ಗ್ರಾಮ ಲೆಕ್ಕಿಗ ಹುದ್ದೆ.
ಸಂಸ್ಥೆ (Organisation): ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ. ಮೈಸೂರು ಜಿಲ್ಲಾ.
ವಿದ್ಯಾರ್ಹತೆ (Educational Qualification): ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಅರ್ಜಿದಾರನು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ 300 ರೂ. ಪ್ರವರ್ಗ-2ಎ,2ಬಿ, 3ಎ, 3ಬಿರ ಅಭ್ಯರ್ಥಿಗಳಿಗೆ 150 ರೂ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ಯಾಂಕ್ ಖಾತೆಗೆ ಜಮಾ ಮಾಡತಕ್ಕದು.
ಅನುಭವ (Experience): ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅಗತ್ಯವಿರುವ ಸ್ಕಿಲ್ಸ್ (Skills Required): ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ಅರ್ಜಿಸಲ್ಲಿಸಲು (Application End Date): ಆಗಸ್ಟ್ 28, 2019