ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (NDDB) ಮೆಕ್ಯಾನಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್ ವಿಶೇಷ-ಕರ್ತವ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಅಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 30,2019 ರ ಒಳಗೆ ಅರ್ಜಿ ಸಲ್ಲಿಸಬೇಕು.
Also read: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
ಹುದ್ದೆಯ ಹೆಸರು (Name Of The Posts): ವಿಶೇಷ-ಕರ್ತವ್ಯ ಅಧಿಕಾರಿ
ಸಂಸ್ಥೆ (Organisation): ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (ಎನ್ಡಿಡಿಬಿ)
ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಬಿಇ / ಬಿ.ಟೆಕ್ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿರುವ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): May 30, 2019
ವಯೋಮಿತಿ: ಈ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಎನ್ಡಿಡಿಬಿಯ ಅಧಿಕೃತ ವೆಬ್ಸೈಟ್ https://www.nddb.coop/ ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿಮಾಡಿ. ಮೇ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ: http://careers.nddb.coop/SitePages/JobSeekerJobDetail.aspx?hash=sR4coaTT9xhbGEpo0H1kH6l%2F0Tz7o7Ehl%2F9qaozVHvc%3D ಕ್ಲಿಕ್ ಮಾಡಿ.