ಮೈತ್ರಿ ಸರ್ಕಾರದ ಪತನದ ಸೂಚನೆ ನೀಡಿದ್ರಾ ಸಿಎಂ ಪುತ್ರ? ಮಧ್ಯಂತರ ಚುನಾವಣೆಗೆ ಈಗ್ಲೇ ಸಿದ್ಧರಾಗಿ ಎಂದು ಕಾರ್ಯಕರ್ತರ ಜೊತೆಯಲ್ಲಿ ಮಾತನಾಡಿದ ವಿಡಿಯೋ ವೈರಲ್

0
303

ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ನಿಖಿಲ್ ಕುಮಾರಸ್ವಾಮಿ ಮತ್ತೆ ಮಧ್ಯಂತರ ಚುನಾವಣೆ ತಯಾರಿ ನಡೆಸಲು ಸೂಚನೆ ನೀಡಿದ್ದು, ಮೈತ್ರಿ ಸರ್ಕಾರದ ಪತನದ ಬಗ್ಗೆ ಮುಖ್ಯಮಂತ್ರಿಯ ಮಗನೆ ಸೂಚನೆ ನೀಡಿದಂತೆ ಆಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಸಂಬಂಧ ಕಾರ್ಯಕರ್ತರ ಜೊತೆಯಲ್ಲಿ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು. ಯಾವಾಗ, ಎಲ್ಲಿ ಮಾತನಾಡಿರುವುದು ಎಂಬುದು ತಿಳಿದು ಬಂದಿಲ್ಲ.

ಹೌದು ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರ ಜೊತೆಯಲ್ಲಿ ಮಾತನಾಡಿದ್ದು, “ಯಾವುದೇ ಸಂದರ್ಭದಲ್ಲಿ ಬೇಕಿದ್ದರೂ ಚುನಾವಣೆ ಬರಬಹುದು ಅದಕ್ಕೆ ನೀವು ಸಿದ್ಧರಾಗಿರಿ. ರಾಜ್ಯ ವಿಧಾನಸಭೆ ಚುನಾವಣೆಗೆ ಸನ್ನದ್ಧರಾಗಿ. ರಾಜ್ಯ ಸರ್ಕಾರಕ್ಕೆ ತೊಂದರೆಯಿಲ್ಲ. ಆದರೂ ನಾವೆಲ್ಲರೂ ಚುನಾವಣೆ ಎದುರಿಸಲು ಸಿದ್ಧರಾಗಿರಬೇಕು. ಇಂದು, ನಾಳೆ ಅಥವಾ ವರ್ಷ ಕಳೆದು ಚುನಾವಣೆ ಬರಬಹುದು. ಯಾವುದೇ ಕ್ಷಣದಲ್ಲಿ ಚುನಾವಣೆ ಬಂದರೂ ನಾವು ಅದಕ್ಕೆ ಸಿದ್ಧರಿರಬೇಕು. ಮುಂದಿನ ತಿಂಗಳಿನಿಂದಲೇ ಚುನಾವಣೆಗೆ ತಯಾರಿ ಮಾಡಿಕೊಳ್ಳಬೇಕು,” ಎಂದು ಜೆಡಿಎಸ್ ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಸೂಚಿಸಿದ್ದಾರೆ. ಈ ವಿಡಿಯೋ ಸುನೀಲ್​ಗೌಡ ದಂಡಿಗಾನಹಳ್ಳಿಯ ಫೇಸ್​ಬುಕ್​ ಪೇಜ್​ನಲ್ಲಿ ವೈರಲ್​ ಆಗಿದೆ.

ಇದೆ ವಿಡಿಯೋದಲ್ಲಿ ಇನ್ನೊಂದು ಮಾತು ಹೇಳಿದ್ದು “ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸರ್ಕಾರ ಕಂಪ್ಲೀಟ್ ಆಗುತ್ತದೆ. ದಿನ ನಿತ್ಯ ಮಾಧ್ಯಮದಲ್ಲಿ ಬರುವುದನ್ನು ನೋಡಿ ನೀವು ಟೆನ್ಷನ್ ಆಗಬೇಡಿ. ಒಳಗಡೆ ಏನು ಅನ್ನೋದು ನಮಗೆ ಗೊತ್ತಿದೆ. ಕುಮಾರಣ್ಣ ನಾಲ್ಕು ವರ್ಷ ನಡೆಸುತ್ತಾರೆ. ಮುಂದಿನ ತಿಂಗಳಿಂದಲೇ ಶುರು ಮಾಡಿ. ಒಂದು ವರ್ಷಕ್ಕೆ ಬರುತ್ತೋ, ಎರಡು ವರ್ಷಕ್ಕೆ ಬರುತ್ತೋ, ಮೂರು ವರ್ಷಕ್ಕೆ ಬರುತ್ತೋ ಗೊತ್ತಿಲ್ಲ. ಆದರೆ ನೀವು ರೆಡಿ ಇರಬೇಕು” ಎಂದು ಜೆಡಿಎಸ್ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಈ ವಿಷಯವನ್ನು ನೋಡಿದರೆ ಸರ್ಕಾರ ಹೆಚ್ಚು ದಿನ ಉಳಿಯೊಲ್ಲ ಎಂಬ ಸುಳಿವು ನೀಡಿದರಾ ನಿಖಿಲ್ ಕುಮಾರಸ್ವಾಮಿ ಎನ್ನುತ್ತಿದ್ದಾರೆ.

ಮೈತ್ರಿ ಪತನದ ಬಗ್ಗೆ ನಿಖಿಲ್ ಸೂಚನೆ?

ಈಗಾಗಲೇ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಜಯಗಳಿಸಿರುವ ಬಿಜೆಪಿ, ರಾಜ್ಯದಲ್ಲಿ ಚುನಾವಣೆ ನಡೆದರೆ ಅದೇ ಅಲೆಯಲ್ಲಿ ಇಲ್ಲಿಯೂ ಸರ್ಕಾರ ರಚಿಸುವುದು ಖಚಿತ ಎಂಬ ಭಯ ಕಾಡುತ್ತಿದೆ. ಆದರೆ, ಸರ್ಕಾರ ಉಳಿಸಿಕೊಳ್ಳುವುದು ಅಷ್ಟು ಸುಲಭವಾಗಿಲ್ಲ. ಅತೃಪ್ತ ಶಾಸಕರು ಪದೇ ಪದೇ ಸರ್ಕಾರ ಹಾಗೂ ತಮ್ಮ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿಯೂ ಹಿರಿಯ ನಾಯಕರ ಸಿಟ್ಟು ಸರ್ಕಾರಕ್ಕೆ ಸಂಚಕಾರ ತರಲಿದೆ ಎಂದು ಹೇಳಲಾಗುತ್ತಿದೆ. ಖರ್ಗೆ ಆಶೀರ್ವಾದ ಪಡೆದು ರಾಜಕಾರಣ ಚರ್ಚಿಸಿದ ನಿಖಿಲ್ ಕುಮಾರಸ್ವಾಮಿ ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ಕಾರ್ಯಕರ್ತರೊಂದಿಗೆ ಆಡಿದ ಮಾತುಗಳು, ಜೆಡಿಎಸ್ ಮತ್ತೊಂದು ಚುನಾವಣೆ ಎದುರಿಸಲು ಸನ್ನದ್ಧವಾಗುತ್ತದೆಯೇ ಎಂಬ ಪ್ರಶ್ನೆ ಮೂಡಿಸಿದೆ.

ಚುನಾವಣೆಗೆ ಸಿದ್ದರಾಗಲು ಸೂಚನೆ ನೀಡಿದ ಸಿಎಂ ಪುತ್ರ;

ಕುಮಾರಣ್ಣನೆ ಇರುತ್ತಾರೆ ವಿಡಿಯೋದಲ್ಲಿ ಆರಂಭದಲ್ಲಿ ಮಾತನಾಡುವಾಗ ನಿಖಿಲ್ ಕುಮಾರಸ್ವಾಮಿ ಅವರು, ಸರ್ಕಾರಕ್ಕೆ ಯಾವ ಸಂಕಷ್ಟವೂ ಇಲ್ಲ ಎಂದು ಜೆಡಿಎಸ್ ಕಾರ್ಯಕರ್ತರನ್ನು ಸಮಾಧಾನಪಡಿಸುತ್ತಾರೆ. ಸರ್ಕಾರಕ್ಕೇನೂ ತೊಂದರೆ ಆಗುವುದಿಲ್ಲ. ಒಳಗಿರುವ ನಮಗೆ ಅದರ ಬಗ್ಗೆ ಹೇಗಿದ್ದರೂ ಗೊತ್ತಿದೆಯಲ್ಲ. ನಾಲ್ಕು ವರ್ಷವೂ ಕುಮಾರಣ್ಣ ಅವರೇ ಸರ್ಕಾರ ನಡೆಸುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಚುನಾವಣೆ ಬರಬಹುದು ಮಾಧ್ಯಮಗಳಲ್ಲಿ ಬರುವ ವರದಿಗಳನ್ನು ನೋಡಿ ಟೆನ್ಷನ್ ಆಗಬೇಡಿ ಎಂದಿರುವ ನಿಖಿಲ್, ಚುನಾವಣೆ ಯಾವಾಗ ನಡೆಯುತ್ತದೆಯೋ ಗೊತ್ತಿಲ್ಲ. ಯಾವಾಗ ಬೇಕಾದರೂ ಚುನಾವಣೆ ಎದುರಾಗಬಹುದು. ಒಂದು ವರ್ಷಕ್ಕೋ, ಎರಡು ವರ್ಷಕ್ಕೋ ಬರಬಹುದು. ಹಾಗಾಗಿ ಈಗಿನಿಂದಲೇ ಅದಕ್ಕೆ ಎಲ್ಲ ತಯಾರಿ ನಡೆಸಿ ಸಿದ್ಧರಾಗಿರಿ ಎಂದು ಸೂಚಿಸಿದ್ದಾರೆ.