ಭಾರತದಲ್ಲಿ ವಾಯು ಮಾಲಿನ್ಯ ಹೆಚ್ಚಾಗಲು ಪಾಕಿಸ್ತಾನ, ಚೀನಾ ವಿಷ ಅನಿಲ ಪ್ರಯೋಗ ಮಾಡಿದೆಯೇ??

0
223

ವಾಯು ಮಾಲಿನ್ಯ ಕುರಿತು ದೆಹಲಿಯಲ್ಲಿ ಮತ್ತೆ ವಿವಾದ ಭುಗಿಲೆದ್ದಿದು, ಇಷ್ಟೊಂದು ಪ್ರಮಾಣದಲ್ಲಿ ಕಂಡು ಬರುತ್ತಿರುವ ಮಾಲಿನ್ಯಕ್ಕೆ ಪಾಕಿಸ್ತಾನ, ಚೀನಾದ ಸಂಚು ಎನ್ನುವ ಮಾತುಗಳು ಕೇಳಿಬರುತ್ತಿವೆ. ಅದರಂತೆ ಪಾಕಿಸ್ತಾನ ನಮ್ಮ ದೇಶದ ಮೇಲೆ ವಿಷ ಅನಿಲ ಪ್ರಯೋಗ ಮಾಡಿದೆಯೇ ಎನ್ನುವ ಅನುಮಾನ ಮೂಡಿದೆ. ಆದರೆ ವಾಯುಮಾಲಿನ್ಯ ತಡೆ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸದ ಅಧಿಕಾರಿಗಳು, ರೈತರ ಮೇಲೆ ಹಾಕುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿತ್ತು. ಈಗ ಕೇಳಿ ಬರುತ್ತಿರುವ ವಿಷಯದಂತೆ ದೆಹಲಿ ವಾಯುಮಾಲಿನ್ಯಕ್ಕೆ ಪಾಕಿಸ್ತಾನ, ಚೀನಾ ಕಾರಣ ಎನ್ನುವ ಪ್ರಶ್ನೆ ಮೂಡಿದೆ.

ಹೌದು ದಿನದಿಂದ ದಿನಕ್ಕೆ ಹದಗೆಡುತ್ತಿರುವ ಭಾರತದಲ್ಲಿ ವಾಯುಗುಣಮಟ್ಟಕ್ಕೆ ಪಾಕಿಸ್ತಾನ ಹಾಗೂ ಚೀನಾ ಕಾರಣ ಎಂದು ಉತ್ತರ ಪ್ರದೇಶ ಬಿಜೆಪಿ ನಾಯಕರೊಬ್ಬರು ಹೇಳಿದ್ದು, ಚೀನಾ ಹಾಗೂ ಪಾಕಿಸ್ತಾನವನ್ನು ದೂಷಿಸಬೇಕು. ಏಕೆಂದರೆ ಭಾರತದೆಡೆಗೆ ವಿಷ ಅನಿಲಗಳನ್ನು ಬಿಡುಗಡೆಗೆ ಮಾಡುತ್ತಿವೆ. ಇದರಿಂದಾಗಿ ರಾಷ್ಟ್ರರಾಜಧಾನಿಯಲ್ಲಿ ವಾಯುಗುಣಮಟ್ಟ ಹದಗೆಟ್ಟಿದೆ ಎಂದು ಬಿಜೆಪಿ ನಾಯಕ ವಿನೀತ್ ಅಗರ್ವಾಲ್ ಶಾರ್ದ ಹೇಳಿದ್ದಾರೆ. ನಮ್ಮ ದೇಶದ ಮೇಲೆ ವಿಷಕಾರಿ ಅನಿಲವನ್ನು ಹಾಕಲಾಗಿದೆ.

ಈ ವಿಷಕಾರಿ ಅನಿಲವನ್ನು ನಮ್ಮ ನೆರೆಯ ಯಾವುದೇ ದೇಶಗಳು ಬಿಡುಗಡೆ ಮಾಡಿರುವ ಸಾಧ್ಯತೆ ಇದೆ. ಪಾಕಿಸ್ತಾನ ಅಥವಾ ಚೀನಾ ನಮಗೆ ಭಯ ಪಡುತ್ತವೆ ಎಂದು ನಾನು ಭಾವಿಸುತ್ತೇನೆ ಎಂದು ಬಿಜೆಪಿ ನಾಯಕ ವಿನೀತ್ ಅಗರ್ವಾಲ್ ಶಾರದಾ ಮೀರತ್‌ನಲ್ಲಿ ಅಭಿಪ್ರಾಯ ಪಟ್ಟಿದ್ದಾರೆ. ಪಾಕಿಸ್ತಾನ ಯಾವುದೇ ವಿಷಕಾರಿ ಅನಿಲವನ್ನು ಬಿಡುಗಡೆ ಮಾಡಿರಬಹುದು ಎಂದು ನಾವು ಗಂಭೀರವಾಗಿ ಪರಿಗಣಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದಲೂ ಪಾಕಿಸ್ತಾನ ನಿರಾಶೆಗೊಂಡಿದೆ. ಅಲ್ಲದೆ ಈವರೆಗಿನ ಯಾವುದೇ ಯುದ್ಧದಲ್ಲಿ ಒಂದೂ ಗೆಲವು ದಾಖಲಿಸಲು ಸಾಧ್ಯವಾಗದ ಕಾರಣ ಭಾರತದ ವಿರುದ್ಧ ಎಲ್ಲ ರೀತಿಯ ತಂತ್ರಗಳನ್ನು ಪಾಕಿಸ್ತಾನ ಅನುಸರಿಸುತ್ತಿದೆ ಎಂದು ಶಾರದಾ ಹೇಳಿದ್ದಾರೆ.

ವಿಷ ಅನಿಲ ಪ್ರಯೋಗ ಮಾಡಿದೆಯೇ?

ಪಾಕಿಸ್ತಾನ ನಮ್ಮ ದೇಶದ ಮೇಲೆ ವಿಷ ಅನಿಲ ಪ್ರಯೋಗ ಮಾಡಿದೆಯೇ ಎಂಬುದನ್ನ ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದಲೂ ಸಹ ಪಾಕಿಸ್ತಾನದ ಭಾರತ ದ್ವೇಷ ಹೆಚ್ಚಿದೆ. ಪ್ರತಿ ಬಾರಿ ಭಾರತದೊಂದಿಗೆ ಸೆಣೆಸಿದಾಗಲೂ ಪಾಕಿಸ್ತಾನ ಸೋತಿದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಇದೇ ವೇಳೆ ವಾಯುಗುಣಮಟ್ಟ ಕುಸಿಯುವುದಕ್ಕೆ ರೈತರು ಹಾಗೂ ಕೈಗಾರಿಕೋದ್ಯಮಿಗಳನ್ನು ದೂಷಿಸಬಾರದು ಎಂದು ಹೇಳಿರುವ ಅವರು, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೂ ಸೇರಿದಂತೆ ಬಹುತೇಕ ಜನರು ಕೈಗಾರಿಕೆ ಹಾಗೂ ಕೃಷಿ ತ್ಯಾಜ್ಯಗಳನ್ನು ಸುಡುವುದರಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಹೇಳುತ್ತಿದ್ದಾರೆ.

ಕಾರ್ಯದರ್ಶಿಗಳಿಗೆ ಸುಪ್ರೀಂ ಛೀಮಾರಿ

ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ಸಂಬಂಧ ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಯಾವುದೇ ದೇಶದಲ್ಲಿ ಕೃಷಿ ತ್ಯಾಜ್ಯ ಸುಡಲು ಸರ್ಕಾರಗಳು ಅನುಮತಿ ಕೊಟ್ಟಿಲ್ಲ. ವಾಯುಮಾಲಿನ್ಯ ತಡೆ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸದ ಅಧಿಕಾರಿಗಳು, ರೈತರ ಮೇಲೆ ಗೂಬೆ ಕೂರಿಸ್ತಿದ್ದೀರಾ? ನಿಮಗೆ ನಾಚಿಕೆ ಆಗುದಿಲ್ಲವೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದೆ. ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಈ ಸಾಧನೆಗೆ ಗರ್ವ ಪಡ್ತಿದ್ದೀರಾ? ಅಧಿಕಾರಿಗಳನ್ನು ಶಿಕ್ಷಿಸುವ ಸಮಯ ಬಂದಿದೆ ಎಂದು ಹೇಳಿ ಎಚ್ಚರಿಸಿದೆ. ಜೊತೆಗೆ, ಮೂರು ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡದಂತೆ ಆದೇಶಿಸಿದೆ.