ಅಮ್ಮನ ಆರೋಗ್ಯದಲ್ಲಿ ಚೇತರಿಕೆ: ಸುದ್ದಿಗೋಷ್ಠಿಯಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ಸ್ಪಷ್ಟನೆ

0
640

ಎಂ.ಎಸ್ ರಾಮಯ್ಯ ಆಸ್ಪತ್ರೆಯ ವ್ಯದ್ಯರು ಕಳೆದ ಕೆಲ ದಿನಗಳಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 77 ವರ್ಷದ ಡಾ.ಪಾರ್ವತಮ್ಮ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ಅವರು ಮೇ 14 ರಂದು ಚಿಕಿತ್ಸೆಗಾಗಿ ಎಂ.ಎಸ್ ರಾಮಯ್ಯ ಆಸ್ಪತ್ರೆ ಸೇರಿದ್ದು, ಪ್ರತಿ 3 ಗಂಟೆಗೊಮ್ಮೆ ಡಯಾಲಿಸಿಸ್ ಮಾಡಲಾಗುತ್ತಿದೆ ಮತ್ತು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ”ಪಾರ್ವತಮ್ಮ ಅನಾರೋಗ್ಯದ ಬಗ್ಗೆ ವದಂತಿಗಳು ಹಬ್ಬಿಸಬೇಡಿ. ಅವರು ಆರೋಗ್ಯವಾಗಿದ್ದಾರೆ. ನಿನ್ನೆಗಿಂತ ಇಂದು ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ. ಹೆಸರು ಕೇಳಿದ್ರೆ, ಹೇಳಲು ಪ್ರಯತ್ನ ಪಡುತ್ತಿದ್ದಾರೆ. ಬಿ.ಪಿ ಶುಗರ್ ನಾರ್ಮಲ್ ಇದೆ. ಡಯಾಲಿಸಿಸ್ ನಡೆಸಲಾಗುತ್ತಿದೆ” ಎಂದು ಪಾರ್ವತಮ್ಮ ಅವರ ಆರೋಗ್ಯದ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಎಂ.ಎಸ್ ರಾಮಯ್ಯ ಆಸ್ಪತ್ರೆಯ ವ್ಯದ್ಯರಾದ ಡಾ.ಸಂಜಯ್ ಕುಲಕರ್ಣಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ಕೂಡ ಭಾಗಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಪ್ಪ್ ಗಳಲ್ಲಿ ಹರಿದಾಡುತ್ತಿರುವುದು ಕೇವಲ ವದಂತಿ. ಅಮ್ಮನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಸ್ಪಷ್ಟಪಡಿಸಿದರು.