ಡೆಂಗ್ಯೂ ಜ್ವರಕ್ಕೆ ರಾಷ್ಟ್ರೀಯ ಫುಟ್ಬಾಲ್ ಆಟಗಾರ್ತಿ ಪೂನಂ ಚವ್ಹಾಣ್ ಬಲಿ

0
878

ವಾರಣಾಸಿ:  ಮಾರಕ ಕಾಯಿಲೆಯಾದ ಡೆಂಗ್ಯೂ ಜ್ವರದಿಂದ  ಬಳಲುತ್ತಿದ್ದ ರಾಷ್ಟ್ರ ಮಟ್ಟದ ಫುಟ್ಬಾಲ್ ಆಟಗಾರ್ತಿ ಪೂನಮ್ ಚೌಹಾಣ್ ಅವರು  ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ .

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಇಲ್ಲಿನ ಮಖ್ಬೂಲ್ ಅಲಂ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 29 ವರ್ಷದ ಪೂನಂ ಅವರು ನಿನ್ನೆ ರಾತ್ರಿ 8.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಪೂನಂ ಚವ್ಹಾಣ್ ಅವರು ಅಂತಾರಾಷ್ಟ್ರೀಯ ಮಹಿಳಾ ಫುಟ್ಬಾಲ್ ತಂಡದಲ್ಲಿ ಗುರುತಿಸಿಕೊಂಡಿ ಉತ್ತರ ಪ್ರದೇಶದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು. ಸೌತ್ ಏಷ್ಯನ್ ಗೇಮ್ಸ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದು ತಂದ ತಂಡದ ಭಾಗವಾಗಿದ್ದರು.

ಕಳೆದ ಕೆಲ ವರ್ಷಗಳಿಂದ ವಾರಾಣಸಿಯ ಸಿಗ್ರಾ ಸ್ಟೇಡಿಯಂನಲ್ಲಿ ಫುಟ್ಬಾಲ್ ತರಬೇತುದಾರೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ರಾಜ್ಯ ಫುಟ್ಬಾಲ್ ಚಾಂಪಿಯನ್ಷಿಪ್ಗೆ ತಯಾರಿ ನಡೆಸುತ್ತಿದ್ದರು.

ಮಣಿಕರ್ಣಿಕಾ ಘಾಟ್ನಲ್ಲಿ ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ.