ಕರ್ನಾಟಕ ಬಂದ್ ವೇಳೆ, ಪೊಲೀಸರಿಗೆ ನೀರಿಳಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ…!!

0
690

ಮೈಸೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿಗೂ ಬಂದ್ ನ ಬಿಸಿ ತಟ್ಟಿತ್ತು. ಬಸ್ ವ್ಯವಸ್ಥೆ ಇಲ್ಲದೇ, ಜನ ಪರದಾಡುತ್ತಿದ್ದರು. ಈ ಹಿನ್ನೆಲೆ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ನಿಲ್ಲಿಸಿದ್ದಕ್ಕೆ ಪೊಲೀಸರಿಂದ ಮಾಹಿತಿ ಕೇಳಿದ್ದಾರೆ ಪ್ರತಾಪ್ ಸಿಂಹ. ಬಸ್ ಯಾಕೆ ನಿಲ್ಲಿಸಿದ್ದೀರಿ…? ಎಂದು ಪೊಲೀಸ್ ಅಧಿಕಾರಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಬಸ್ ಇಲ್ಲದೇ, ಕುಳಿತಿದ್ದ ಪ್ರಯಾಣಿಕರನ್ನು ಮಾತನಾಡಿಸಿ ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ. ಜತೆಗೆ ಅಧಿಕಾರಗಳನ್ನು ತರಾಟೆಗೆ ತೆಗೆದುಕೊಂಡು ಬಸ್ ನಿಲ್ದಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಇನ್ನು ಕರ್ನಾಟಕ ಬಂದ್‌ ಹಾಗೂ ಸರಕಾರಿ ಬಸ್‌ಗಳ ಸಂಚಾರ ಸ್ಥಗಿತದ ಹೊರತಾಗಿಯೂ ಮೈಸೂರಿನಲ್ಲಿ ಗುರುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಯಶಸ್ವಿಯಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಭಾಗವಹಿಸಿದ್ದ ಈ ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.