ನೋಟು ನಿಷೇಧ ಖಂಡಿಸಿ ಬೀದಿಯಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ

0
630

500 ಮತ್ತು 1000 ರೂಪಾಯಿ ನೋಟುಗಳನ್ನು ನಿಷೇಧ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬೀದಿಗಿಳಿದಿದ್ದಾರೆ.

ಗರಿಷ್ಠ ಮೌಲ್ಯದ ನೋಟುಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಕಾಂಗ್ರೆಸ್ ಸೇರಿದಂತೆ 12 ವಿರೋಧ ಪಕ್ಷಗಳ 200 ಸಂಸದರು ಸಂಸತ್ ಭವನದ ಗಾಂಧಿ ಪ್ರತಿಮೆ ಮುಂದೆ ಇಂದು ಬೆಳಿಗ್ಗೆ ಸಾಮೂಹಿಕ ಧರಣಿ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದರೊಂದಿಗೆ ಪ್ರತಿಪಕ್ಷಗಳ ಪ್ರತಿಭಟನೆ ಸಂಸತ್ತಿನ ಹೊರಗೂ ತೀವ್ರಗೊಂಡಂತಾಗಿದೆ. ಇದೇ ವೇಳೆ ದೇಶದ ವಿವಿಧೆಡೆ ಪ್ರತಿಭಟನೆ ಮುಂದುವರಿದಿವೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈಗಾಗಲೇ ಕಳೆದ ಆರು ದಿನಗಳಿಂದ ಪ್ರತಿಭಟನೆ-ಧರಣಿ ನಡೆಸಿ ಕಲಾಪಕ್ಕೆ ಅಡ್ಡಿ ಉಂಟು ಮಾಡಿರುವ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಅಮ್ ಆದ್ಮಿ ಪಕ್ಷ, ಕಮ್ಯೂನಿಸ್ಟ್ ಸೇರಿದಂತೆ ವಿವಿಧ ಪ್ರತಿಪಕ್ಷಗಳು ಪಾರ್ಲಿಮೆಂಟ್ ಹೊರಗೂ ಹೋರಾಟವನ್ನು ತೀವ್ರಗೊಳಿಸಿವೆ.

ರಾಜಧಾನಿ ದೆಹಲಿಯಲ್ಲಿ ಸಂಸತ್ ಭವನದ ಗಾಂಧಿ ಪ್ರತಿಮೆ ಮುಂದೆ ಸಮಾವೇಶಗೊಂಡ 200 ಸಂಸದರು ಧರಣಿ ಸರ್ಕಾರ ನಿರ್ಧಾರವನ್ನು ಕಟುವಾಗಿ ಟೀಕಿಸಿದರು.

ಈ ಹಿಂದೆ ಹಲವು ವಿಚಾರಗಳಲ್ಲಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಿದ್ದ ಎಐಎಡಿಎಂಕೆ ಕೂಡ ಪ್ರತಿಭಟನೆಗೆ ಸಾಥ್ ಕೊಟ್ಟಿದೆ. ಆದ್ರೆ ಶಿವಸೇನೆ ಮಾತ್ರ ಉಲ್ಟಾ ಹೊಡೆದಿದೆ. ಆರಂಭದಲ್ಲಿ ಮೋದಿ ನಿರ್ಧಾರ ವಿರೋಧಿಸಿ ಕೇಜ್ರಿವಾಲ್ ಹಾಗೂ ಮಮತಾ ಬ್ಯಾನರ್ಜಿ ಅವರ ಪ್ರತಿಭಟನೆಯನ್ನು ಬೆಂಬಲಿಸಿದ್ದ ಶಿವಸೇನೆ ಈಗ ವರಸೆ ಬದಲಿಸಿದೆ.

ಮೋದಿ ಅವರ ನಿರ್ಧಾರ ಐತಿಹಾಸಿಕ ಮತ್ತು ದಿಟ್ಟತನದಿಂದ ಕೂಡಿದ್ದು ಎಂದು ಬಣ್ಣಿಸುವ ಮೂಲಕ ಪ್ರತಿಭಟನೆಯಿಂದ ಹಿಂದೆ ಸರಿದಿದೆ.