ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 477 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
448

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 477 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ ಮೂಲಕ ಸೆಪ್ಟೆಂಬರ್ 25,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ

ಸಂಸ್ಥೆ (Organisation): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)

ವಿದ್ಯಾರ್ಹತೆ (Educational Qualification): ಹುದ್ದೆಗಳಿಗನುಸಾರ ಬಿ.ಇ,ಬಿ.ಟೆಕ್,ಪದವಿ,ಎಂ.ಎಸ್ಸಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ (Age): ಜೂನ್ 30,2019ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 30,35,38 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 125/-ರೂ
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: (Application End Date): September 25, 2019

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://sbi.co.in/ ಕ್ಲಿಕ್ ಮಾಡಿ.