ನಾಳೆ ಎಚ್.ವಿಶ್ವನಾಥ್ ಮತ್ತು ಸಾ ರಾ ಮಹೇಶ್ ನಡುವೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ; ರಾಜಕೀಯ ನಾಯಕರ ಮಕ್ಕಳಾಟಕ್ಕೆ ದೇವರನ್ನು ಬಳಸುವುದು ಎಷ್ಟೊಂದು ಸರಿ??

0
393

ಅನರ್ಹ ಶಾಸಕ ಎಚ್.ವಿಶ್ವನಾಥ್ ಮತ್ತು ಮಾಜಿ ಸಚಿವ ಸಾ ರಾ ಮಹೇಶ್ ನಡುವೆ ಹಲವು ದಿನಗಳಿಂದ ಕೇಸರ್ ಎರಚಾಟ ನಡೆದಿದ್ದು, ಭಾರಿ ಮಾತಿನ ಚಕಮಕಿ ಕೇಳಿ ಬಂದು ದೇವರ ಮೇಲೆ ಕೈಯಿಟ್ಟು ಪ್ರಮಾಣ ಮಾಡುವ ಹಂತಕ್ಕೆ ಬಂದಿದೆ. ಇದು ವೈರಲ್ ಆಗುತ್ತಿದ್ದಂತೆ ಜನ ನಾಯಕರಾದರು ಇನ್ನೂ ಮಕ್ಕಳಾಟ ಬಿಟ್ಟಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ, ಏಕೆಂದರೆ ಜನರು ತಮ್ಮ ಸೇವೆಗಾಗಿ ಆಯ್ಕೆ ಮಾಡಿದರೆ ಇವರು ಚಿಕ್ಕ ವಿಷಯಕ್ಕೆ ವರ್ಷದ ವರೆಗೆ ಗುದ್ದಾಡಿ ಆಗುವ ಕೆಲಸವನ್ನು ಮರೆಯುತ್ತಿದ್ದಾರೆ ಎನ್ನುವುದು ರಾಜ್ಯದ ಜನರ ಅಭಿಪ್ರಾಯವಾದರೆ ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದಲ್ಲಿ ಇಬ್ಬರ ನಡುವೆ ಆಣೆ ಪ್ರಮಾಣ ಮಾಡಲು ಕುಸ್ತಿ ನಡೆಯಲಿದೆ.

ಹೌದು ಈ ಪ್ರಭಾವಿ ಜನನಾಯಕರನ್ನು ನೋಡಿ ನಗೆಬೇಕೋ ಇಲ್ಲ ಇವರನ್ನು ಕುರ್ಚಿ ಮೇಲೆ ಕೂರಿಸಿದ ಜನರನ್ನು ನೋಡಿ ನಗಬೇಕೋ ತಿಳಿಯುತ್ತಿಲ್ಲ, ಏಕೆಂದರೆ ಇಂದು ಬೆಳಗ್ಗೆಯಷ್ಟೇ ಸಾರಾ ಮಹೇಶ್ ಸುದ್ದಿಗೋಷ್ಠಿ ನಡೆಸಿ, ನಾಳೆ ನಾನು ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ. ವಿಶ್ವನಾಥ್ ಅವರು ಚಾಮುಂಡಿ ದೇವಿ ಮುಂದೆ ನಿಂತು ನಾನು ಯಾವುದೇ ಆಸೆ ಅಮಿಷಕ್ಕೆ ಒಳಗಾಗಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಅನರ್ಹ ಶಾಸಕ ಎಚ್.ವಿಶ್ವನಾಥ್ ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಈ ಕುರಿತು ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ವಿಶ್ವನಾಥ್ ಅವರು ಚಾಮುಂಡಿ ದೇವಿ ಮುಂದೆ ನಿಂತು ನಾನು ಯಾವುದೇ ಆಸೆ ಅಮಿಷಕ್ಕೆ ಒಳಗಾಗಿಲ್ಲ ಎಂದು ಪ್ರಮಾಣ ಮಾಡಿದರೆ ಅಲ್ಲೇ ನಾನು ನಾಡಿನ ಜನರ ಮುಂದೆ ಬೇಷರತ್ ಕ್ಷಮೆ ಕೇಳುತ್ತೇನೆ. ಹುಣಸೂರಿಗೆ ಹೊಸ ಡಿವೈಎಸ್ಪಿ ಹಾಕಿಸಿಕೊಂಡಿದ್ದೀರಿ, ಅದಕ್ಕೆ ಎಷ್ಟು ಹಣ ಪಡೆದಿದ್ದೀರಿ. ಕುಮಾರಣ್ಣನ ಮುಂದೆ ಎಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದೀರಿ, ಎಲ್ಲವನ್ನೂ ನಾನು ಚಾಮುಂಡಿ ಸನ್ನಿಧಿಯಲ್ಲೇ ಹೇಳುತ್ತೇನೆ ಎಂದರು. ಚಾಮುಂಡಿ ಮುಂದೆ ಪ್ರಮಾಣ ಮಾಡಲು ವಿಶ್ವನಾಥ್ ಬರಲಿ. ಅವರೊಂದಿಗೆ ಪತ್ರಕರ್ತ ಮರಂಕಲ್ ಅವರನ್ನೂ ಕರೆತರಲಿ, ಅವರಿಗೆ ಸತ್ಯ ಗೊತ್ತಿದೆ. ಶರಣಗೌಡ ಪಾಟೀಲ್ ವಿಚಾರದಲ್ಲೂ ಅವರ ಮರಂಕಲ್ ಪಾತ್ರ ಇತ್ತು. ಇದರಲ್ಲೂ ಅವರ ಪಾತ್ರ ಇದೆ. ಹೀಗಾಗಿ ನಾಳೆ ಬೆಟ್ಟಕ್ಕೆ ಮರಂಕಲ್ ಅವರನ್ನು ಕರೆದುಕೊಂಡು ಬರಲಿ, ಅವರಿಗೆ ಸತ್ಯ ಗೊತ್ತಿದೆ. ಮರಂಕಲ್ ಮುಂದೆಯೇ ವಿಶ್ವನಾಥ್ ಚಾಮುಂಡಿ ತಾಯಿ ಬಳಿ ಪ್ರಮಾಣ ಮಾಡಲಿ. ಚಾಮುಂಡಿ ಪಾದ ಬೇಡ ಗೋಪುರದ ಬಳಿಯೇ ಪ್ರಮಾಣ ಮಾಡಲಿ ಸಾಕು ಎಂದು ಸವಾಲು ಹಾಕಿದ್ದಾರೆ.

ವಿಶ್ವನಾಥ್ ಹೇಳಿದ್ದೇನು?

ಮೈಸೂರು ಜಿಲ್ಲೆ ವಿಭಜನೆಗೆ ಪಟ್ಟು ಹಿಡಿದು ಕುಳಿತಿರುವ ಅನರ್ಹ ಶಾಸಕ ಹೆಚ್ ವಿಶ್ವನಾಥ್, ವಿಭಜನೆ ವಿರೋಧಿಸಿದವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು ನನ್ನೊಬ್ಬನ ಆಶಯ ಅಲ್ಲ. ಕಿ.ಮೀ. ಲೆಕ್ಕವೂ ಅಲ್ಲ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದರು. ಕಿ.ಮೀ. ಬಗ್ಗೆ ಮಾತಾಡುವ ಸಿದ್ದರಾಮಯ್ಯ ಅಧ್ಯಯನ ಮಾಡೋದು ಒಳಿತು. ಸಿದ್ದರಾಮಯ್ಯ ಡಿಸಿಎಂ ಆಗಿದ್ದಾಗ ಚಾಮರಾಜನಗರ ಜಿಲ್ಲೆ ಆಗಿಲ್ಲವೇ ಎಂದು ಪ್ರಶ್ನಿಸಿದ್ದರು. ಜಿಲ್ಲೆ ಒಡೆಯುವುದು ಚುನಾವಣೆ ಗಿಮಿಕ್ ಎಂದ ಸಾರಾ ಮಹೇಶ್ ಅವರಿಗೂ ವಿಶ್ವನಾಥ್ ತಿರುಗೇಟು ನೀಡಿದ್ದರು. ನನ್ನನ್ನು 25 ಕೋಟಿ ರೂ.ಗೆ ಮಾರಿಕೊಂಡವನು ಎಂದು ಸಾ.ರಾ ಮಹೇಶ್ ಹೇಳಿದಾಗಲೆಲ್ಲಾ ನನ್ನ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ನನ್ನನ್ನು ಯಾರು ಕೊಂಡುಕೊಂಡಿದ್ದಾರೆ ಎಂದು ಗುರುವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಬಂದು ಹೇಳಲಿ. ನಾನು ಕೂಡ ಅಲ್ಲಿಗೆ ಹೋಗುತ್ತೇನೆ ಎಂದು ಸಾರಾ ಮಹೇಶ್‍ಗೆ ಸವಾಲ್ ಹಾಕಿದ್ದಾರೆ. ಒಟ್ಟಾರೆಯಾಗಿ ನಾಳೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ ನಡೆಯಲಿದ್ದು, ತಮ್ಮ ರಾಜಕೀಯ ಲಾಭಕೆ ದೇವರನ್ನು ಬಳಕೆ ಮಾಡುತ್ತಿರುವುದು ಎಷ್ಟೊಂದು ಸರಿ?