ರಾಜ್ಯ ದ್ರೋಹಿಗಳಿಂದ ಮತ್ತೆ ಪುಂಡುತನ, ಮುಧೋಳದಲ್ಲಿ ಉತ್ತರ ಕರ್ನಾಟಕದ ಧ್ವಜ ಹಾರಿಸಿ ಮತ್ತೆ ಪ್ರತ್ಯೇಕ ರಾಜ್ಯದ ಕಿಚ್ಚು ಹತ್ತಿಸಿದ್ದಾರೆ!!

0
600

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಕೂಗು ಬಹುದಿನಗಳಿಂದ ಕೇಳಿಬರುತ್ತಿದೆ. ಇದಕ್ಕೆ ಒತ್ತಾಯಿಸಿ ಹಲವಾರು ಹೋರಾಟಗಳು ನಡೆಯುತ್ತಿವೆ. ಈ ಹೋರಾಟಕ್ಕೆ ಹಲವಾರು ರಾಜಕೀಯ ನಾಯಕರು ಮತ್ತು ಸಂಘ ಸಂಸ್ಥೆಗಳು ಬೆಂಬಲ ಸೂಚಿಸುತ್ತಿವೆ. ಸ್ವಲ್ಪ ದಿನಗಳಿಂದ ಬೂದಿಮುಚ್ಚಿದ ಕೆಂಡದಂತ್ತಿದ್ದ ಈ ಹೋರಾಟ ಮತ್ತೆ ತಿರುವು ಪಡೆದುಕೊಂಡಿದೆ. ಇದಕ್ಕೆ ಮುಖ್ಯಕಾರಣ ನಿರಂತರವಾಗಿ ಆಗುತ್ತಿರುವ ಮಲತಾಯಿ ದೋರಣೆ ಎಂದು ದೂರಿದ ಹೋರಾಟಗಾರರು ಇಂದು ಬಾಗಲಕೋಟೆಯ ಮುಧೋಳದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ನೆರವೇರಿಸಿದ್ದಾರೆ.

Also read: ಬೆಂಗಳೂರಿನ ಪೊಲೀಸ್ ಅಧಿಕಾರಿಗಳಿಂದ ಜನರಿಗೆ ಹೊಸ ವರ್ಷಕ್ಕೆ ಇಂಥದ್ದೊಂದು ಉಡುಗೊರೆ ಹಿಂದೆಂದೂ ಸಿಕ್ಕೇ ಇರಲಿಲ್ಲ!!

ಹೌದು ಬಹುದಿನಗಳ ಬೇಡಿಕೆಯ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಸೆ.23 ರಂದು ಸಭೆ ನಡೆಸಿದ್ದ ಸಮಿತಿ ಜ. 1 ರಂದು ಪ್ರತ್ಯೇಕ ರಾಜ್ಯ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಆಚರಿಸುವುದಾಗಿ ಘೋಷಿಸಿತ್ತು. ಜತೆಗೆ ನೀಲಿ ಬಣ್ಣದಲ್ಲಿ ಉಕ ನಕ್ಷೆ ಹೊಂದಿದ್ದ ವಿನ್ಯಾಸದ ಧ್ವಜ ಹಾಗೂ ಬಾಗಲಕೋಟೆಯನ್ನು ಹೊಸ ರಾಜ್ಯದ ರಾಜಧಾನಿಯಾಗಿ ಘೋಷಿಸಲಾಗಿತ್ತು. ಅದರಂತೆಯೇ ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಕಚೇರಿ ಆವರಣದಲ್ಲಿ ಇಂದು ಧ್ವಜಾರೋಹಣ ನೆರವೇರಿಸಲಾಯಿತು.

ಪ್ರತ್ಯೇಕ ಧ್ವಜದ ಸಂಕೇತ:

ಉತ್ತರ ಕರ್ನಾಟಕದ ಪ್ರತ್ಯೇಕ ಧ್ವಜವು 4 ಬಣ್ಣಗಳಿಂದ ಕೂಡಿದ್ದು, ಮಧ್ಯದಲ್ಲಿ ಉತ್ತರ ಕರ್ನಾಟಕದ ನಕ್ಷೆಯನ್ನು ಒಳಗೊಂಡಿದೆ. ಈ ಮೂರು ಬಣ್ಣಗಳ ಮಧ್ಯೆ ನೀಲಿ ವರ್ಣದ ಉತ್ತರ ಕರ್ನಾಟಕ ನಕ್ಷೆಯ ಧ್ವಜವನ್ನು ಹುಟ್ಟಿಸಲಾಗಿದೆ. ಹಾಗೆಯೇ ಕೇಸರಿ ಬಣ್ಣ ಧೈರ್ಯ, ಶೌರ್ಯದ ಸಂಕೇತವಾದರೆ, ಹಳದಿ ಹೊಸತನದ ಸಂಕೇತ, ಹಸಿರು ಸಮೃದ್ಧಿಯ ಸಂಕೇತ ಹಾಗೂ ನೀಲಿ ವಿಶಾಲತೆಯ ಸಂಕೇತ ಎಂದು ಹೊಸ ಧ್ವಜದಲ್ಲಿ ತಿಳಿಸಲಾಗಿದೆ.

ಈ ಕುರಿತು ಮಾತನಾಡಿದ ಪ್ರಧಾನ ಕಾರ್ಯದರ್ಶಿ:

ಈ ಪ್ರತ್ಯೇಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಮಾತನಾಡಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಹೀಗೆ ನೂತನ ಧ್ವಜವನ್ನು ಸೃಷ್ಟಿಸಿ ಧ್ವಜಾರೋಹಣ ಮಾಡಿದ್ದೇವೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿ. ಆಗ ಇಲ್ಲಿನ ಮನೆ ಮನೆಯಲ್ಲೂ ಈ ಧ್ವಜವನ್ನು ಹಾರಿಸೋಣ ಎಂದು ಹೇಳಿದರು.

ಈ ಸಮಯದಲ್ಲಿ ಬಾಗಿಯಾಗಿದ್ದ ಇತರೇ ಹೋರಾಟಗಾರರು ಮಾತನಾಡಿ ಒಟ್ಟು ಉತ್ತರ ಕರ್ನಾಟಕದ ಹದಿಮೂರು ಜಿಲ್ಲೆಗಳು ಒಳಗೊಂಡ ನಕ್ಷೆಯನ್ನು ಧ್ವಜದ ಮಧ್ಯೆ ರೂಪಿಸಲಾಗಿದೆ. ಹಾಗೆಯೇ ಕೇಸರಿ ಬಣ್ಣ ಧೈರ್ಯ, ಶೌರ್ಯದ ಸಂಕೇತವಾದರೆ, ಹಳದಿ ಹೊಸತನದ ಸಂಕೇತ, ಹಸಿರು ಸಮೃದ್ಧಿಯ ಸಂಕೇತ ಹಾಗೂ ನೀಲಿ ವಿಶಾಲತೆಯ ಸಂಕೇತ ಎಂದು ಹೊಸ ಧ್ವಜದಲ್ಲಿದೆ. ಹಾಗೆಯೇ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವ ವರೆಗೆ ನಮ್ಮ ಹೋರಾಟ ನಡೆಯುತ್ತಾನೆ ಇರುತ್ತೆ ಎಂದು ಹೋರಾಟಗಾರರು ತಿಳಿಸಿದರು.