ಎಸ್‌ಎಸ್‌ಸಿ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
385

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸಿಬ್ಬಂದಿ ನೇಮಕ ಆಯೋಗ(ಎಸ್‌ಎಸ್‌ಸಿ) ದೆಹಲಿ ಪೊಲೀಸ್, ಸಿಎಪಿಎಫ್ ಮತ್ತು ಸಿಐಎಸ್‌ಎಫ್​ನ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಸೆಂಟ್ರಲ್ ಕೋಲ್​ಫೀಲ್ಡ್​ ಲಿಮಿಟೆಡ್​ನ ಹಲವಾರು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗಳ ಹೆಸರು: CAPFs ಮತ್ತು ದೆಹಲಿ ಪೊಲೀಸ್​ನ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಮತ್ತು ಸಿಐಎಸ್‌ಎಫ್‌ನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ)

ಶೈಕ್ಷಣಿಕ ಅರ್ಹತೆ: ಯಾವುದಾದರೂ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಯು 20 ರಿಂದ 25 ವರ್ಷಗಳ ಒಳಗಿರಬೇಕು. ಇನ್ನು ವಯೋಮಿತಿ ವಿನಾಯಿತಿ ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ನೀಡಲಾಗುತ್ತದೆ.

ಅರ್ಜಿ ಶುಲ್ಕ: 100 ರೂ. ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಅಕ್ಟೋಬರ್ 2019.
ಆನ್‌ಲೈನ್​ನಲ್ಲಿ ಶುಲ್ಕವನ್ನು ಪಾವತಿಸುವ ಕೊನೆಯ ದಿನಾಂಕ – 18 ಅಕ್ಟೋಬರ್ 2019.
ಹೆಚ್ಚಿನ ಮಾಹಿತಿಗಾಗಿ: http://ssc.nic.in/ ಕ್ಲಿಕ್ ಮಾಡಿ.