ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಯುಗಾದಿ ಹಬ್ಬದ ಗಿಫ್ಟ್

0
560

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ. ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಸರ್ಕಾರಿ ನೌಕರರಿಗೆ ಶೇ. 3ರಷ್ಟು ತುಟ್ಟಿ ಭತ್ಯೆ ಮಂಜೂರು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಈ ಆದೇಶ ಹೊರಡಿಸಿದ್ದಾರೆ. ಜನವರಿ ಒಂದರಿಂದಲೇ ಪೂರ್ವಾನ್ವಯ ಆಗುವಂತೆ ತುಟ್ಟಿ ಭತ್ಯೆ ಏರಿಕೆಯಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 3 ರಷ್ಟು ಏರಿಕೆ ಮಾಡಿ ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ಸರ್ಕಾರ ಆದೇಶ ಹೊರಡಿಸಿದೆ.   ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.3ರಷ್ಟು ಏರಿಕೆ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆ ನೀಡಿದೆ. ಕಳೆದ ಬಾರಿ ಶೇ. 4.25 ರಷ್ಟು ಹೆಚ್ಚಳ ಮಾಡಲಾಗಿತ್ತು.