ರಾಜ್ಯದಲ್ಲಿ ಮತ್ತೆ ಒಂದು ಸಾವಿರಕ್ಕೂ ಹೆಚ್ಚು ಆಂಗ್ಲ ಶಾಲೆ ತೆರೆಯಲು ಮುಂದಾದ ಸರಕಾರ? ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭವಾಗಲಿವೆ ಶಾಲೆಗಳು.!

0
297

ರಾಜ್ಯದಲ್ಲಿ ಹೆಚ್ಚುವರಿಯಾಗಿ ಇನ್ನೂ ಒಂದು ಸಾವಿರ ಶಾಲೆಗಳನ್ನು ಶುರುಮಾಡಲು ಬಿಜೆಪಿ ನೇತೃತ್ವದ ರಾಜ್ಯಸರ್ಕಾರ ಮುಂದಾಗಿದ್ದು ರಾಜ್ಯ ಸರ್ಕಾರ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಒಂದು ಸಾವಿರ ಆಂಗ್ಲ ಶಾಲೆಗಳನ್ನು ತೆರೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ. ಅದರಂತೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವುದರ ಜೊತೆಗೆ ಸರ್ಕಾರಿ ಶಾಲೆಗಳಲ್ಲೂ ಮಕ್ಕಳನ್ನು ಈಗಿನ ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಆಂಗ್ಲಶಾಲೆಗಳನ್ನು ಪ್ರಾರಂಭಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ತಿಳಿಸಿದ್ದಾರೆ.

Also read: ಪಾಲಕರೇ ಮಕ್ಕಳ ಕೈಯಲ್ಲಿ ವಾಹನ ಕೊಡುವ ಮುನ್ನ ಎಚ್ಚರ; ನಿಮಗೆ ಬಿಳ್ಳುತ್ತೆ 25 ಸಾವಿರ ದಂಡದ ಜೊತೆಗೆ 3 ವರ್ಷ ಜೈಲು ವಾಸ.!

ರಾಜ್ಯದಲ್ಲಿ ಇನ್ನೂ1 ಸಾವಿರ ಆಂಗ್ಲ ಶಾಲೆ?

ಹೌದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುವುದಾಗಿ ಘೋಷಿಸಿದ್ದರು. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರ ಘೋಷಣೆ ಮಾಡಿದಂತೆ ರಾಜ್ಯದ ನಾನಾ ಕಡೆ ಆಂಗ್ಲ ಶಾಲೆಗಳನ್ನು ಪ್ರಾರಂಭಿಸಿತು. ಇದಕ್ಕೆ ಪೋಷಕರಿಂದ ನಿರೀಕ್ಷೆಗೂ ಮೀರಿದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದಿಂದ ವಿವಿಧ ಭಾಗಗಳಲ್ಲಿ ಒಂದು ಸಾವಿರ ಆಂಗ್ಲ ಶಾಲೆಗಳನ್ನು ತೆರೆಯಲಿದೆ. ಅದಕ್ಕೆ ಸಂಬಂಧಪಟ್ಟಂತೆ ಯಾವ ಯಾವ ಭಾಗಗಳಲ್ಲಿ ಎಷ್ಟು ಶಾಲೆಗಳನ್ನು ತೆರೆಯಬೇಕು ಎಂಬುದರ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.

Also read: ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಸಾವಿನ ದವಡೆಯಲ್ಲಿರುವ ಪುಟಾಣಿಗಳು; ಮಕ್ಕಳ ಮಾತನ್ನು ಕೇಳಿದರೆ ಎಂತಹವರ ಕರುಳು ಹಿಂಡುತ್ತೆ.!

ಅಂಗ್ಲ ಶಾಲೆಗಳಿಂದ ಸರ್ಕಾರಿ ಶಾಲೆಗಳ ಅಸ್ತಿತ್ವಕ್ಕೆ ಎಲ್ಲಿಯೂ ಕೂಡ ಕಿಂಚಿತ್ತೂ ಧಕ್ಕೆಯಾಗದಂತೆ ಎಚ್ಚರವಹಿಸಲಾಗುವುದು. ಮತ್ತು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವುದರ ಜೊತೆಗೆ ಸರ್ಕಾರಿ ಶಾಲೆಗಳಲ್ಲೂ ಮಕ್ಕಳನ್ನು ಈಗಿನ ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಆಂಗ್ಲಶಾಲೆಗಳನ್ನು ಪ್ರಾರಂಭಿಸುವ ಚಿಂತನೆ ಸರ್ಕಾರದ ಮುಂದಿದೆ. ಆಂಗ್ಲಶಾಲೆಗಳನ್ನು ತೆರೆಯಬೇಕೆಂಬ ಬೇಡಿಕೆ ಖುದ್ದು ಪೋಷಕರಿಂದಲೇ ಹೆಚ್ಚಾಗಿದೆ. ಕಳೆದ ವರ್ಷ ಆರಂಭಿಸಿದ ಶಾಲೆಗಳಲ್ಲಿ ಪ್ರವೇಶಾತಿ ಹೆಚ್ಚಾಗಿರುವ ಕಾರಣ ಈ ಕ್ರಮವನ್ನು ತೆಗೆದುಕೊಂಡಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಇಂಗ್ಲೀಷ್ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ.

ಶೈಕ್ಷಣಿಕವಾಗಿ ಯಾವ ಯಾವ ಜಿಲ್ಲೆಗಳು ಹಿಂದುಳಿದಿವೆಯೋ ಅಂತಹ ಕಡೆ ಶಾಲೆಗಳನ್ನು ಆರಂಭಿಸಲಾಗುವುದು. ಈ ಸಂಬಂಧ ಈಗಾಗಲೇ ಸುರೇಶ್‍ಕುಮಾರ್ ಅವರು ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಯಾವ ಯಾವ ಭಾಗದಲ್ಲಿ ತೆರೆಯಬೇಕು ಎಂಬುದರ ಬಗ್ಗೆ ವರದಿ ನೀಡುವಂತೆ ಸೂಚನೆ ಕೊಟ್ಟಿದ್ದಾರೆ. ಆದರೆ ಸರ್ಕಾರಿ ಶಾಲೆಗಳಿಗೆ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಲಾಗಿದೆ. ಈಗಾಗಲೇ ಆಂಗ್ಲಶಾಲೆಗಳಿಗೆ ಬೇಕಾದ ಶಿಕ್ಷಕರನ್ನು ತರಬೇತಿಗೊಳಿಸುವಂತೆಯೂ ಅಧಿಕಾರಿಗಳಿಗೂ ಸೂಚಿಸಲಾಗಿದೆ. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಈ ಶಿಕ್ಷಕರಿಗೆ ತರಬೇತಿ ನೀಡಲು ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಅಂಗ್ಲ ಶಾಲೆಗೆ ವಿರೋಧ?

Also read: ಹೊಸ ಕಾರು ಖರೀಧಿಸುವವರಿಗೆ ಸುವರ್ಣಾವಕಾಶ; 2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್ ಆಫರ್, ಯಾವ ಕಾರಿಗೆ ಎಷ್ಟು ಕಡಿಮೆ ಇಲ್ಲಿದೆ ನೋಡಿ ಮಾಹಿತಿ.!

ಸರ್ಕಾರ ಒಂದು ಸಾವಿರ ಆಂಗ್ಲಶಾಲೆಗಳನ್ನು ಪ್ರಾರಂಭಿಸಲು ಮುಂದಾಗಿರುವ ಪ್ರಸ್ತಾವನೆಗೆ ಸಾಹಿತ್ಯ ವಲಯ ಮತ್ತು ಸಾರ್ವಜನಿಕ ವಲಯದಲ್ಲೂ ವಿರೋಧ ವ್ಯಕ್ತವಾಗಿದೆ. ಈಗಿರುವ ಸರ್ಕಾರಿ ಶಾಲೆಗಳಿಗೆ ಸರ್ಕಾರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟರೆ ಯಾರೊಬ್ಬರು ಖಾಸಗಿ ಇಲ್ಲವೇ ಆಂಗ್ಲಮಾಧ್ಯಮ ಶಾಲೆಗಳತ್ತ ಮುಖ ಮಾಡುವುದಿಲ್ಲ. ಆದರೆ ಇರುವ ಶಾಲೆಗಳನ್ನೇ ಸರಿಯಾಗಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಇಂಥ ಸಂದರ್ಭದಲ್ಲಿ ಒಂದು ಸಾವಿರ ಶಾಲೆಗಳನ್ನು ಪ್ರಾರಂಭಿಸುವ ಅಗತ್ಯವಾದರೂ ಏನಿದೇ ಎಂದು ವಿರೋಧಿಸಿದ್ದಾರೆ.