ನಿವಾರ್ ಚಂಡಮಾರುತ: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

0
189

ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಭಾರಿ ಮಳೆ ಬರುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ನಿವಾರ್ ಚಂಡಮಾರುತ್ತ ಉಂಟಾಗಿದೆ. ಇದೇ ಸಮಯದಲ್ಲಿ ನೈರುತ್ಯ ಅರಬ್ಬಿ ಸಮುದ್ರದಲ್ಲಿ ಗತಿ ಚಂಡಮಾರುತ ಎದ್ದಿದೆ. ಇದೆ ಕಾರಣಕ್ಕೆ ರಾಜ್ಯದಲ್ಲಿ ಮಳೆಯಾಗುವು ಸಾಧ್ಯತೆಯಿದೆ. ನಿವಾರ್ ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ದೊಡ್ಡಮಟ್ಟದ ಮಳೆಯಾಗುತ್ತದೆ. ಆದ್ದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 25,26 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಾಮರಾಜನಗರ, ಸೇರಿ ಒಟ್ಟು ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಿವಾರ್ ಚಂಡಮಾರುತ ಪೂರ್ವ ದಿಕ್ಕಿನ ಕಡೆಗೆ ಹೋಗಿ ಸಾಗಿ ತಮಿಳುನಾಡು ಪ್ರವೇಶಿಸುತ್ತದೆ. ಅಲ್ಲಿಂದ ದಕ್ಷಿಣ ಭಾರತ ಕಡೆಗೆ ವಾಲಿ ಹಲವಡೆ ಮಳೆ ಬರುವು ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಒಂದೆಡೆ ನಿವಾರ್ ಮತ್ತೊಂದೆಡೆ ಸೈಕ್ಲೋನ್ ನಿಂದಾಗಿ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ .
ನವೆಂಬರ್ 25ರಂದು ಕರೈಕಲ್, ಪುದುಚೆರಿಯಲ್ಲಿ, ನ. 25 ಮತ್ತು 26ರಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲಸೀಮೆ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆ ಸುರಿಸುವ ಸಂಭವವಿದೆ. ವಿಶಾಖಪಟ್ಟಣಂ ಮತ್ತು ಪೂರ್ವ ಗೋದಾವರಿ ಜಿಲ್ಲೆಯಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರಸ್ತುತ ನಿವಾರ್ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯತ್ತ ಪಶ್ಚಿಮದಿಂದ ಚಲಿಸುತ್ತಿದೆ. ಹೀಗಾಗಿ ಈ ಭಾಗಗಳಲ್ಲಿ ನವೆಂಬರ್ 26ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ.

ಇನ್ನು ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ತಮಿಳುನಾಡಿನ ಚೆನ್ನೈ ಸೇರಿದಂತೆ ಅನೇಕ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ತಮಿಳುನಾಡು ಕರಾವಳಿಯತ್ತ ಸಾಗುತ್ತಿರುವ ಈ ಚಂಡಮಾರುತ ನಿವಾರ್, ನಾಳೆ ಕರೈಕಲ್ ಮತ್ತು ಮಹಾಬಲಿಪುರಂಗೆ ಅಪ್ಪಳಿಸಲಿದೆ. ಹೀಗಾಗಿ ಈ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಕೇವಲ ತಮಿಳುನಾಡು ಮಾತ್ರವಲ್ಲದೇ, ನೆರೆಯ ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಕೆಲ ಭಾಗಗಳಿಗೂ ನಿವಾರ್ ಚಂಡಮಾರುತದ ಎಪೆಕ್ಟ್ ತಟ್ಟಲಿದ್ದು, ಇಲ್ಲಿಯೂ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Also read: ಕಾಲೇಜುಗಳು ತೆರೆದು ಒಂದು ವಾರಕ್ಕೆ 250 ಮಕ್ಕಳಲ್ಲಿ ಕೋಚಿಡ್‌ ಸೋಂಕು