ಮಹಾರಾಷ್ಟ್ರದಲ್ಲಿ ಮುಗಿಯಿತು ಬಿಜೆಪಿ ಆಟ; ಮುಂದಿನ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅಧಿಕೃತ ಘೋಷಣೆ.!

0
315

ದೇಶದಲ್ಲಿ ಭಾರಿ ಆಶ್ಚರ್ಯಿ ಮೂಡಿಸಿದ ಬಿಜೆಪಿ ಸರ್ಕಾರದ ನಡೆಗೆ ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು, ಅದರಂತೆ ನಾಳೆ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ಈ ಬೆನ್ನಲ್ಲೇ ಅಜಿತ್ ಪವಾರ್ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತ ಸಿಎಂ ದೇವೇಂದ್ರ ಫಡ್ನವೀಸ್ ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ. ಇತ್ತ ಸಂಜೆ 5 ಗಂಟೆಗೆ ಎನ್‍ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಜಂಟಿ ಸುದ್ದಿಗೋಷ್ಠಿಯನ್ನು ಕರೆದಿವೆ. ಈಗಾಗಲೇ ಅಜಿತ್ ಪವಾರ್ ಅವರನ್ನು ಎನ್‍ಸಿಪಿ ಶಾಸಕಾಂಗ ನಾಯಕ ಸ್ಥಾನದಿಂದ ಉಚ್ಛಾಟಿಸಿ ಜಯಂತ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಹೌದು ಮಹಾರಾಷ್ಟ್ರ ರಾಜಕೀಯದಲ್ಲಿ ಬಿಜೆಪಿ ಸರ್ಕಾರ ಮುಗಿಯುವ ಲಕ್ಷಣಗಳು ಕಂಡು ಬಂದಿದ್ದು, ಸುಪ್ರೀಂ ಕೋರ್ಟ್​ ಆದೇಶಿಸಿದ ಹಿನ್ನೆಲೆಯಲ್ಲಿ, ಬಿಜೆಪಿ ಮತ್ತು ಎನ್​ಸಿಪಿ ರೆಬೆಲ್​ ಅಜಿತ್​ ಪವಾರ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆಯೇ ಶರದ್​ ಪವಾರ್​ ಮುಖ್ಯಮಂತ್ರಿ ಆಯ್ಕೆ ಕುರಿತು ಮಾತನಾಡಿದ್ದಾರೆ. ಮೂಲಗಳ ಪ್ರಕಾರ, ಎನ್​ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್​ ಶಾಸಕರು ತಂಗಿರುವ ಹೋಟೆಲ್​ನಲ್ಲಿ ಮಾತನಾಡಿರುವ ಪವಾರ್​, ಉದ್ಧವ್​ ಠಾಕ್ರೆ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದ್ಧಾರೆ.

“ಉದ್ಧವ್​ ಠಾಕ್ರೆ ಮಹಾಮೈತ್ರಿ ಸರ್ಕಾರದ ಮುಂದಾಳತ್ವ ವಹಿಸುತ್ತಾರೆ. ಅವರೇ ಮೂರೂ ಪಕ್ಷಗಳ ನಾಯಕರಾಗಿ ಸರ್ಕಾರವನ್ನು ಪ್ರತಿನಿಧಿಸುತ್ತಾರೆ. ಉದ್ಧವ್​ ನನ್ನ ಮಾತನ್ನು ಗೌರವಿಸಬೇಕು. ಮುಂದಿನ ಮುಖ್ಯಮಂತ್ರಿ ಉದ್ಧವ್​,” ಎಂದು ಹೇಳಿದ್ದಾರೆ ಎನ್ನಲಾಗಿದೆ. ಜತೆಗೆ ಉದ್ಧವ್​ಗೆ ಒಂದು ಷರತ್ತನ್ನು ಸಹ ವಿಧಿಸಲಾಗಿದ್ದು, ಶರದ್​ ಪವಾರ್​ ಮಾತನ್ನು ಮುಂದಿನ ದಿನಗಳಲ್ಲಿ ಮೀರುವಂತಿಲ್ಲ ಎಂಬ ಮಾತುಕತೆಯಾಗಿದೆ ಎನ್ನಲಾಗುತ್ತಿದೆ. ಇಂದು ಸಂಜೆ ಸುಮಾರು 6 ಗಂಟೆಗೆ ಈ ನಿರ್ಧಾರವನ್ನು ಪವಾರ್​ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ಸುಪ್ರಿಂಕೋರ್ಟ್ ಆದೇಶವೇನು?

ಚುನಾವಣೆ ನಡೆಸದೇ ಹಿರಿಯ ಶಾಸಕರೊಬ್ಬರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಬೇಕು. ಬುಧವಾರ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕು. ಬಹುಮತ ಸಾಬೀತು ಸಂಪೂರ್ಣ ಪ್ರಕ್ರಿಯೆ ನೇರ ಪ್ರಸಾರವಾಗಬೇಕು. ವಿಶ್ವಾಸಮತ ಯಾಚನೆಗೂ ಮುನ್ನ ಎಲ್ಲ ಶಾಸಕರ ಪ್ರಮಾಣವಚನ ತೆಗೆದುಕೊಳ್ಳಬೇಕು. ಗುಪ್ತ ಮತದಾನ ಮಾಡುವಂತಿಲ್ಲ, ಎಲ್ಲ ಪ್ರಕ್ರಿಯೆಗಳು ಪಾರದರ್ಶಕವಾಗಿರಬೇಕು ಎಂದು ನಾಳೆ ವಿಶ್ವಾಸಮತ ಯಾಚಿಸುವಂತೆ ಕೋರ್ಟ್ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಸರ್ಕಾರಕ್ಕೆ​​ ಸೂಚಿಸಿದೆ. ಈ ಮೂಲಕ ಪ್ರತಿಪಕ್ಷಗಳಿಗೆ ಜಯ ದೊರೆತಂತಾಗಿದೆ.

ಅದರಂತೆ ಸುಪ್ರಿಂಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಬಿಜೆಪಿ ಮತ್ತು ಎನ್​ಸಿಪಿ ರೆಬೆಲ್​ ಅಜಿತ್​ ಪವಾರ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆಯೇ ಶರದ್​ ಪವಾರ್​ ಮುಖ್ಯಮಂತ್ರಿ ಆಯ್ಕೆ ಕುರಿತು ಮಾತನಾಡಿದ್ದಾರೆ. ಮೂಲಗಳ ಪ್ರಕಾರ, ಎನ್​ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್​ ಶಾಸಕರು ತಂಗಿರುವ ಹೋಟೆಲ್​ನಲ್ಲಿ ಮಾತನಾಡಿರುವ ಪವಾರ್​, ಉದ್ಧವ್​ ಠಾಕ್ರೆ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದ್ಧಾರೆ.

Also read: ವಯಸ್ಸಲ್ಲಿ ಸುಧಾ ಮೂರ್ತಿಯವರಿಗಿಂತ ದೊಡ್ಡವರಾಗಿದ್ದರೂ ವ್ಯಕ್ತಿತ್ವಕ್ಕೆ ಬೆಲೆ ಕೊಟ್ಟು ಅವರ ಕಾಲಿಗೆ ನಮಸ್ಕರಿಸಿದ ಅಮಿತಾಬ್ ಬಚ್ಚನ್!!