ಕೇಂದ್ರ ಲೋಕ ಸೇವಾ ಆಯೋಗ 495 ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
519

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಲೋಕ ಸೇವಾ ಆಯೋಗ 495 ಇಂಜಿನಿಯರಿಂಗ್ ಸರ್ವಿಸಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 15,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಇಂಜಿನಿಯರಿಂಗ್ ಸರ್ವಿಸಸ್

ವಿದ್ಯಾರ್ಹತೆ: ಇಂಜಿನಿಯರಿಂಗ್‌ನಲ್ಲಿ ಪದವಿ / ಡಿಪ್ಲೋಮಾ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಪರೀಕ್ಷಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಯೋಮಿತಿ: ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 25,2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 15,2019ರ ಸಂಜೆ 6 ಗಂಟೆ

ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 15,2019

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಅಕ್ಟೋಬರ್ 15,2019ರ ಸಂಜೆ 6ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://www.upsc.gov.in/ ಕ್ಲಿಕ್ ಮಾಡಿ.