ಹೈಕಮಾಂಡ್ ನಂಬಿಕೆ ಇಟ್ಟು ಜವಾಬ್ದಾರಿ ನೀಡಿದೆ ನಾವು ಹೇಗೆ ಪಕ್ಷ ಕಟ್ಟುತ್ತೇವೆ ಎಂದು ನೀವೇ ನೋಡುತ್ತೀರಾ; ಡಿ.ಕೆ. ಶಿವಕುಮಾರ್.!

0
189

ಭಾರಿ ಕುತೂಹಲಕ್ಕೆ ಕಾರಣವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊನೆಗೂ ಟ್ರಬಲ್​ ಶೂಟರ್​ ಡಿ.ಕೆ ಶಿವಕುಮಾರ್ ಅವರಿಗೆ ಸಿಕ್ಕಿದು, ಸರಿಯಾದ ನಾಯಕರನ್ನು ಆಯ್ಕೆ ಮಾಡುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದೇ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅದರಂತೆ ಮೊಗಸಾಲೆಯಲ್ಲಿ ಡಿಕೆಶಿ ಇರುವಾಗಲೇ ಕೆಪಿಸಿಸಿ ಸಾರಥಿ ಪ್ರಕಟವಾಗಿ ಸಂಭ್ರಮ ಮನೆ ಮಾಡಿತು. ನೂತನ ಕಾಂಗ್ರೆಸ್ ಸಾರಥಿಗೆ ಸಿದ್ದರಾಮಯ್ಯ, ಸೇರಿದಂತೆ ಹಲವು ಶುಭಾಶಯ ತಿಳಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದ್ರಲ್ಲಿ ಅನುಮಾನವಿಲ್ಲವೆಂದು ಹಲವರು ಹರ್ಷ ವ್ಯಕ್ತಪಡಿಸಿದ್ದಾರೆ.

ಹೌದು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಡಿ ಕೆ ಶಿವಕುಮಾರ್ ಈ ಒಂದು ದಿನಕ್ಕೆ ಹಲವು ತಿಂಗಳುಗಳಿಂದ ಕಾಯುತ್ತಿದ್ದರು. ಅವರ ನೇಮಕಾತಿ ಅವರ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರಿಗೆ ಹೊಸ ಹುರುಪು ತಂದಿದೆ ಎಂಬುದರಲ್ಲಿ ಸಂಶಯವಿಲ್ಲ. 2018ರ ವಿಧಾನಸಭೆ ಚುನಾವಣೆಯಲ್ಲಿ ಮತಗಳ ವಿಭಜನೆಯಲ್ಲಿ 2013ರ ವಿಧಾನಸಭೆ ಚುನಾವಣೆಗಿಂತ ಶೇಕಡಾ 1.5ಕ್ಕೆ ಇಳಿದಿದ್ದ ಕಾಂಗ್ರೆಸ್ ಜೆಡಿಎಸ್ ಮತ ಗಳಿಸಿದ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಮತದಾರರ ಮನವೊಲಿಸಿ ಮತ್ತೆ ಕಾಂಗ್ರೆಸ್ ನತ್ತ ಕರೆತರುವ ಸವಾಲು, ಒತ್ತಡದಲ್ಲಿದೆ. ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ಸಹಾಯಾಗಬಹುದು ಎಂಬ ಲೆಕ್ಕಾಚಾರವಿದೆ.

ಈ ಕುರಿತು ಮಾತನಾಡಿದ ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು. ಪಕ್ಷ ತಮ್ಮ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ನೀಡಿದೆ. ಪಕ್ಷವನ್ನು ಕಟ್ಟುವ ಸಂಪೂರ್ಣ ಜವಾಬ್ದಾರಿ ತಮ್ಮ ಮೇಲಿದ್ದು, ಅದನ್ನು ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ನಿನ್ನೆ ಈ ಕುರಿತು ಮಾತನಾಡಿದ ಅವರು, ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಯಲ್ಲಿ ನಾನು ನಂಬಿಕೆ ಹೊಂದಿದ್ದೇನೆ. ಅಧಿಕಾರಕ್ಕಾಗಿ ಗುಂಪು ಕಟ್ಟುವವನು ನಾನಲ್ಲ. ಪಕ್ಷದ ಬಲವರ್ಧನೆಗೆ ಎಲ್ಲಾ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ ಎಂದಿದ್ದರು. ಕೆಪಿಸಿಸಿ ಅಧ್ಯಕ್ಷರಾದ ಹಿನ್ನೆಲೆ ಅವರಿಗೆ ಶುಭಕೋರಲು ನಾಯಕರು ಹಾಗೂ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಈ ಕುರಿತು ಮಾತನಾಡಿದ ಅವರು ದಯವಿಟ್ಟು ಹೂವಿನ ಮಾಲೆ, ಬೊಕ್ಕೆ ತರಬೇಡಿ. ಅನಗತ್ಯವಾಗಿ ಕಾರ್ಯಕರ್ತರು ಹಣವನ್ನು ವ್ಯರ್ಥ ಮಾಡಬೇಡಿ. ಬೂತ್​ಮಟ್ಟದಿಂದ ನಾವು ಪಕ್ಷವನ್ನು ಕಟ್ಟಬೇಕಿದೆ. ನಿಮ್ಮ ಹಣವನ್ನು ಹೂಗಳಿಗೆ ವ್ಯರ್ಥ ಮಾಡಬೇಡಿ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಹೊಸ ಸಾರಥಿಗಳು ಯಾರು?

ಇನ್ನ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಸ್ಪಷ್ಟ ನಿರ್ಧಾರ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದೆ. ಜತೆಗೆ ಹಾಲಿ ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ, ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಸಲಿಂ ಅಹಮ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ ಜೇವರ್ಗಿ ಕ್ಷೇತ್ರದ ಅಜಯ್‍ಸಿಂಗ್ ಅವರನ್ನು , ವಿಧಾನಪರಷತ್‍ಗೆ ನಾರಾಯಣಸ್ವಾಮಿ ಅವರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ.

Also read: ದೇಶದ ಆರ್ಥಿಕ ವ್ಯವಸ್ಥೆ ಬಗ್ಗೆ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಜನರನ್ನು ಇನ್ನಷ್ಟು ಹೆದರಿಸಲು ನೋಡುತ್ತಿರುವ ಕೇಂದ್ರ ಸರ್ಕಾರದ ಧೋರಣೆ ತಪ್ಪು ಡಿ.ಕೆ. ಶಿವಕುಮಾರ್