ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಿದ್ದ ಇರ್ಫಾನ್ ಖಾನ್ ಕೇವಲ 600 ರೂ ಇಲ್ಲದ ಕಾರಣಕ್ಕೆ ಕ್ರಿಕೆಟರ್ ಆಗುವ ಕನಸು ಬಿಟ್ಟ ಕಥೆ ಓದಿ!!

0
287

ಬಾಲಿವುಡ್-ನಲ್ಲಿ ಅಚ್ಚಳಿಯದ ಹೆಸರು ಮಾಡಿದ ನಟ ಇರ್ಫಾನ್ ಖಾನ್ ಕ್ಯಾನ್ಸರ್-ನಿಂದ ಮೃತಪಟ್ಟಿದ್ದು ಸಿನಿಮಾ ರಂಗ ಸೇರಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ, ಏಕೆಂದರೆ ಜೀವನದಲ್ಲಿ ಕಡು ಬಡತನದಿಂದ ಬಂದ ಇರ್ಪಾನ್ ಖಾನ್ ಜಾಗತಿಕ ಸಿನಿಮಾ ಮತ್ತು ಕಿರುತೆರೆಗೆ ಭಾರತೀಯ ಬ್ರ್ಯಾಂಡ್ ಅಂಬಾಸಡರ್ನಂತಿದ್ದರು. ಕಳೆದ ವಾರವಷ್ಟೇ ಅವರ ತಾಯಿ ನಿಧನರಾಗಿದ್ದರು. ಲಾಕ್ ಡೌನ್ ನಿಂದಾಗಿ ತಮ್ಮ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿರಲಿಲ್ಲ. ಈ ಬಳಿಕ ಅನಾರೋಗ್ಯದಿಂದಾಗಿ ತಾವು ಕೂಡ ಮುಂಬೈನ ಕೋಕಿಲಾಬೆನ್ ಧೀರುಬಾಯಿ ಅಂಬಾನಿ ಆಸ್ಪತ್ರೆಗೆ ಕಳೆದ ಎರಡು ದಿನಗಳ ಹಿಂದೆ ದಾಖಲಾಗಿದ್ದರು. ಇವರಿಗೆ ಸಿನಿಮಾಕ್ಕಿಂತ ಮೊದಲು ಕ್ರಿಕೆಟರ್ ಆಗಬೇಕು ಎನ್ನುವ ಗುರಿ ಇತ್ತು ಆದರೆ ಬರಿ 600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಜಗತ್ತಿನಿಂದ ಹೊರ ಬಂದಿದ್ದರಂತೆ.

ಹೌದು ಆಧುನಿಕ ಬಾಲಿವುಡ್ನ ಕಿಂಗ್ ಎಂದೇ ಕರೆಯಲಾಗುವ ನಟ ಇರ್ಫಾನ್ ಖಾನ್ 54ರ ಹರೆಯದಲ್ಲಿ ಇಹಲೋಕ ತ್ಯಜಿಸಿದ್ಧಾರೆ. ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋಲಪ್ಪಿ ಕಣ್ಮರೆಯಾಗಿದ್ದಾರೆ. ಅವರ ನಿಧನಕ್ಕೆ ಬಾಲಿವುಡ್ ಜಗತ್ತು ಮತ್ತು ರಾಜಕೀಯ ಕ್ಷೇತ್ರ ಆಘಾತ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ‘ಇರ್ಫಾನ್ ಅವರ ಸಾವು ಚಿತ್ರರಂಗ ಮತ್ತು ರಂಗಭೂಮಿಗೆ ತುಂಬಲಾರದ ನಷ್ಟ. ಅವರು ತಮ್ಮ ಅದ್ಭುತ ಅಭಿನಯದಿಂದ ಜನರ ಮನಸ್ಸಿನಲ್ಲಿ ಸದಾ ಹಸಿರಾಗಿರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಮೋದಿ ಹೇಳಿದ್ದಾರೆ. ಈ ವೇಳೆ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು, ಇರ್ಫಾನ್ ಖಾನ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

600 ರೂ. ಇಲ್ಲದ್ದಕ್ಕೆ ಕ್ರಿಕೆಟರ್ ಆಗಲಿಲ್ಲ ಇರ್ಫಾನ್:

ಹೌದು ಇರ್ಫಾನ್ ಖಾನ್ ಒಬ್ಬ ಕ್ರಿಕೆಟಿಗ ಎನ್ನುವುದು ಯಾರಿಗೆ ತಿಳಿದಿಲ್ಲ. ಇರ್ಫಾನ್ ಒಂದು ಕಾಲದಲ್ಲಿ 600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಜಗತ್ತಿನಿಂದ ಹೊರ ಬಂದಿದ್ದರಂತೆ ಅದರಂತೆ ಇರ್ಫಾನ್ 20ನೇ ವಯಸ್ಸಿನಲ್ಲಿ ಕ್ರಿಕೆಟಿಗನಾಗಬೇಕೆಂಬ ಕನಸು ಕಟ್ಟಿಕೊಂಡಿದ್ದರು. ಅದಕ್ಕೆ ತಕ್ಕಂತೆ ಅಭ್ಯಾಸ ನಡೆಸಿದ್ದ ಅವರು ಸಿಕೆ ನಾಯ್ಡು ಟ್ರೋಫಿಯಲ್ಲಿ ಆಡಲು ಆಯ್ಕೆಯಾಗಿದ್ದರು. ಆದರೆ ಹಣದ ಕೊರತೆಯಿಂದಾಗಿ ಕ್ರಿಕೆಟ್ ಕನಸಿನ ಮನೆಯಿಂದ ಹೊರ ನಡೆದು ಬಂದು ಬಿಟ್ಟರು. ಈ ವಿಚಾರವಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಇರ್ಫಾನ್ ಖಾನ್, “ನಾನು ಕ್ರಿಕೆಟ್ ಆಡಿದ್ದೇನೆ, ಕ್ರಿಕೆಟಿಗನಾಗಲು ಬಯಸಿದ್ದೆ. ಜೈಪುರ ತಂಡದಲ್ಲಿ ಕಿರಿಯ ಆಟಗಾರನಾಗಿದ್ದ ನಾನು ಆಲ್‍ರೌಂಡರ್ ಜವಾಬ್ದಾರಿ ನಿರ್ವಹಿಸಿದ್ದೆ. ಕ್ರಿಕೆಟ್‍ನಲ್ಲಿಯೇ ವೃತ್ತಿಜೀವನ ಆರಂಭಿಸಲು ಬಯಸಿದ್ದೆ. ಆದರೆ ಸಿ.ಕೆ.ನಾಯ್ಡು ಟೂರ್ನಿಗೆ ಆಯ್ಕೆಯಾದಾಗ 600 ರೂ. ಶುಲ್ಕ ಪಾವತಿಸಲು ನನ್ನ ಬಳಿ ಹಣವಿರಲಿಲ್ಲ. ಆಗ ಯಾರನ್ನ ಕೇಳಬೇಕೆಂದು ತಿಳಿದಿರಲಿಲ್ಲ. ಅಂದಿನಿಂದ ಕ್ರಿಕೆಟ್ ಮನೆಯಿಂದ ಹೊರ ಬಂದುಬಿಟ್ಟೆ” ಎಂದು ಹೇಳಿದ್ದರು.

ನಂತರದ ದಿನಗಳಲ್ಲಿ ಇರ್ಫಾನ್ ಪ್ರತಿಷ್ಠಿತ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (ಎನ್‍ಎಸ್‍ಡಿ)ದಲ್ಲಿ ಪ್ರವೇಶ ಪಡೆದರು. ಅದಕ್ಕಾಗಿ ಅವರಿಗೆ 300 ರೂ. ಅಗತ್ಯವಿತ್ತು. ಅವರ ಬಳಿ ಅಷ್ಟು ಹಣವಿಲ್ಲದಿದ್ದಾಗ ಸಹೋದರಿಯೇ ಹಣದ ವ್ಯವಸ್ಥೆ ಮಾಡಿದ್ದರು. 1994-98ರವರೆಗೆ ‘ಚಂದ್ರಕಾಂತ’ ಹಾಗೂ ‘ಬನೇಗಿ ಅಪ್ನಿ ಬಾತ್’ ನಂತಹ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದ ಇರ್ಫಾನ್ ಖಾನ್, 1988ರಲ್ಲಿ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ ಆಗಿರುವಾಗಲೇ ‘ಸಲಾಮ್ ಬಾಂಬೆ’ ಚಿತ್ರದಲ್ಲಿ ನಟನೆಯ ಆಹ್ವಾನ ಪಡೆದುಕೊಂಡಿದ್ರು. ಅಂದಿನಿಂದ ಕ್ರಿಕೆಟ್ ವೃತ್ತಿ ಬದುಕಿನ ಕಡೆಗೆ ಅವರು ತಿರುಗಿ ನೋಡಲಿಲ್ಲ. ಅಂದಿನಿಂದ ಮತ್ತೆ ಏನಾದರು ಸಾಧನೆ ಮಾಡಬೇಕು ಎಂದು ಸಿನಿಮಾ ರಂಗದಲ್ಲಿ ನಟನಾಗಿ ಮಿಂಚಿದರು.