10 ನೇ ತರಗತಿ ಪಾಸದವರಿಗೆ ವೆಸ್ಟ್​ ಸೆಂಟ್ರಲ್ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಹುದ್ದೆಗಳು.!

0
368

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ವೆಸ್ಟ್​ ಸೆಂಟ್ರಲ್ ರೈಲ್ವೆಯ ವಿವಿಧ ವಿಭಾಗಗಳಲ್ಲಿ 160 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು wcr.indianrailways.gov.in ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

Also read: ಮಂಡ್ಯ ಜಿಲ್ಲೆಯಲ್ಲಿ 130 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಅಪ್ರೆಂಟಿಸ್ ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರ ವಯಸ್ಸು 15 ರಿಂದ 24 ವರ್ಷಗಳ ಒಗಿರಬೇಕು. ಇದಲ್ಲದೆ ಆಯಾ ಮೀಸಲಾತಿ ಅವಕಾಶವಿರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅಗತ್ಯ ಪ್ರಮಾಣ ಪತ್ರಗಳು:

  • 10 ನೇ ತರಗತಿ ಅಂಕಪಟ್ಟಿ
  • ಜನನ ಪ್ರಮಾಣ ಪತ್ರ , ಶಾಲಾ ಟಿಸಿ
  • ಐಟಿಐ ಡಿಪ್ಲೊಮಾ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ವೆಸ್ಟ್​ ಸೆಂಟ್ರಲ್​ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಮೂಲಕ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 5 ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ತರಬೇತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: wcr.indianrailways.gov.in ಕ್ಲಿಕ್ ಮಾಡಿ.