ನರೇಂದ್ರ ಮೋದಿಯವರ ಆಡಳಿತದಲ್ಲಿ ಕಾಶಿ ಗಂಗಾ ನದಿಗೆ ಏನು ಮಾಡಿದ್ದಾರೆ ಎನ್ನುವ ಪ್ರಶ್ನೆಗಳು ಹುಟ್ಟುತ್ತಿವೆ ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಾರಣಾಸಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇವರು ಈ ಬಾರಿಯ ವಾರಣಾಸಿಯಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದಾರೆ. ಅಂದರೆ ಮೋದಿಯವರು ಇಲ್ಲಿಯವರೆಗೆ ಈ ಕ್ಷೇತ್ರ ಕಾಶಿ ವಿಶ್ವನಾಥನ ಸ್ಥಳಕ್ಕೆ ಮತ್ತು ಗಂಗಾ ನದಿಯ ಉಳಿವಿಗಾಗಿ ಏನೆಲ್ಲಾ ಮಾಡಿದ್ದಾರೆ? ಇಲ್ಲಿಯೇ ಯಾಕೆ ಸ್ಪರ್ಧಿಸುತ್ತಿದ್ದಾರೆ? ಎನ್ನುವುದಕ್ಕೆ ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ಅವರು ನಡೆಸಿದ ಬುಲೆಟ್ ರಿಪೋರ್ಟರ್ ನಲ್ಲಿ ಸ್ಥಳಿಯರು ನೀಡಿದ ಉತ್ತರ ಇಲ್ಲಿದೆ.
ಈಗ ಗಂಗಾ ನದಿಯ ಪರಿಸ್ಥಿತಿ ಹೇಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹೌದು ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಕಾಶಿ ಹಿಮಾಲಯದ ತಪ್ಪಲಿನಲ್ಲಿರುವ ಗಂಗೋತ್ರಿ. ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಹನಿಗಳ ಉಪಯೋಗದಿಂದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿದೆ. ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸಿದ್ಧವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಆದರೆ ಜನರು ಮಾಡುವ ಮಲಿನತೆಯಿಂದ ಗಂಗಾನದಿ ಹಾಳಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.
ಇದನ್ನು ಸುದ್ದಗೊಳಿಸುವಲ್ಲಿ ಮೋದಿ ಸರ್ಕಾರ ಏನು ಮಾಡಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಪುರಾತನ ನಗರಿ ಎಂದೇ ಕರೆಸಿಕೊಂಡಿದೆ. ಇಲ್ಲಿಗೆ 5,000ಕ್ಕೂ ಹೆಚ್ಚು ಪ್ರವಾಸಿಗರು ಪ್ರತಿ ನಿತ್ಯ ಬಂದು ಹೋಗುತ್ತಾರೆ. ಆದರೆ ಅಲ್ಲಿನ ಪರಿಸ್ಥಿತಿ ಹೇಗಿತ್ತು ಎಂದರೆ. ಎಲ್ಲೆಂದರಲ್ಲಿ ಜೋತು ಬಿದ್ದ ವೈರ್ಗಳು, ಎಲ್ಲೆಂದರಲ್ಲಿ ಎಸೆಯುತ್ತಿದ್ದ ಪ್ಲಾಸ್ಟಿಕ್ ಚೀಲಗಳು, ಗಂಗಾ ನದಿಯ ತಟದಲ್ಲಂತೂ ನಿಲ್ಲಲು ಅಸಾಧ್ಯವಾಗುವ ರೀತಿಯಲ್ಲಿ ನೈರ್ಮಲ್ಯ, ವಾಸನೆಯಿಂದ ತುಂಬಿರುತ್ತಿತ್ತು. ಆದರೆ ಈಗ ಕಾಶಿ ಬದಲಾಗಿದೆ. ಈ ಕ್ಷೇತ್ರದಲ್ಲಿ ಈಗ ಅಭಿವೃದ್ಧಿಯ ಕಂಡು ಬರುತ್ತಿದೆ.
ಹೆಚ್ಚು ಮಲಿನತೆಯಿಂದ ಕೂಡಿದ ಘಾಟ್ಗಳಲ್ಲಿ ಸ್ವಚ್ಛತೆ ಕಾಣಿಸುತ್ತಿದೆ. 2014ರಲ್ಲಿದ್ದ ಘಾಟ್ಗಳಿಗೂ ಈಗಿರುವ ಘಾಟ್ಗಳಿಗೂ ತುಂಬಾ ವ್ಯತ್ಯಾಸವಿದೆ. ಘಾಟ್ಗಳಲ್ಲಿ ಪ್ರತಿ 4 ಗಂಟೆಗಳಿಗೊಮ್ಮೆ ಕಸವನ್ನು ಗುಡಿಸಲಾಗುತ್ತದೆ. ಗಂಗಾ ನದಿಯಲ್ಲಿ ಎಸೆಯುವ ಹೂ, ತೆಂಗಿನಕಾಯಿ, ಪ್ಲಾಸ್ಟಿಕ್ ಕಸವನ್ನು ಬೋಟ್ನಲ್ಲಿ ಹೋಗಿ ಸ್ವಚ್ಛಗೊಳಿಸಲಾಗುತ್ತದೆ. ಇನ್ನು ಪ್ರತಿ ಘಾಟ್ಗಳಲ್ಲೂ ಎರಡೆರಡು ಕಸದ ಡಬ್ಬಿಗಳನ್ನ ಇಡಲಾಗಿದೆ. ಜೊತೆಗೆ ಘಾಟ್ನಲ್ಲಿರುವ ಅರ್ಚಕರು, ನಾವಿಕರು, ಪ್ರವಾಸಿಗರಿಗೆ ಸೂಚನೆ ನೀಡಲಾಗುತ್ತದೆ. ಅದರಂತೆ ಈಗಾಗಲೇ 80 ರಷ್ಟು ಸುದ್ದತೆ ಕಂಡು ಬಂದಿದೆ.
ಗಂಗಾ ನದಿಯ ಸ್ವಚ್ಚತೆ ಹೇಗಿದೆ?
ಭಕ್ತರು ಮತ್ತು ಪ್ರವಾಸಿಗರು ಪ್ರತಿನಿತ್ಯವೂ ಅಪಾರ ಪ್ರಮಾಣದಲ್ಲಿ ಕಸ ಬಿಸಾಡುತ್ತಾರೆ. ವಾರಣಾಸಿಯಲ್ಲಿನ ಚರಂಡಿ ನೀರು ಇನ್ನೂ ಗಂಗಾ ನದಿಯನ್ನು ಸೇರುತ್ತಿದೆ. ಸುಮಾರು 175 ಕಡೆ ಇಂತಹ ಚರಂಡಿ ನೀರನ್ನು ಗಂಗಾ ನದಿಗೆ ಬಿಡುವ ಜಾಗಗಳಿವೆ. ಇದರಲ್ಲಿ ಪ್ರಮುಖ ಘಾಟ್ಗಳಲ್ಲಿನ ಈ ಮೋರಿ ನೀರನ್ನು ಬಿಡುವುದನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಆದರೆ ಆ ಎಲ್ಲ ಮೋರಿ ನೀರು ಘಾಟ್ಗಳನ್ನು ದಾಟಿ ಮುಂದೆ ಹೋದ ನಂತರ ಗಂಗಾ ನದಿಗೆ ದೊಡ್ಡ ಪ್ರಮಾಣದಲ್ಲಿ ಚರಂಡಿ ನೀರನ್ನು ಬಿಡಲಾಗುತ್ತದೆ. ಬಳಿಕ ಇದೇ ಗಂಗಾ ನದಿಯ ನೀರನ್ನ ಶುದ್ಧೀಕರಿಸಿ ವಾರಣಾಸಿಯ ಜನತೆ ಕುಡಿಯುವ ನೀರನ್ನಾಗಿ ಸರಬರಾಜು ಮಾಡಲಾಗುತ್ತದೆ.
ಇಂತಹ ಜಾಗದಲ್ಲಿ ಈ ಹಿಂದೆ ವಿದ್ಯುತ್ ಸಂಪರ್ಕಿಸುವ ತಂತಿಗಳು ಎಲ್ಲೆಂದರೆಲ್ಲಿ ತೂಗಾಡುತ್ತಿದ್ದವು, ಆದ್ರೆ ಇದೆಲ್ಲ ಈಗ ಬದಲಾಗಿದೆ. ಜೊತೆಗೆ ಕಾಶಿ ವಿಶ್ವನಾಥನ ಮಂದಿರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲೂ ಎಲ್ಲೆಂದರಲ್ಲಿ ಜೋತಾಡುತ್ತಿದ್ದ ವೈರ್ -ಗಳು ಈಗ ಭೂಮಿಯಡಿಯಲ್ಲಿ ಹೋಗಿವೆ ಇದು ಇಲ್ಲಿನ ಜನರ ಮನ ಸೆಳೆದಿದೆ. 24 ಗಂಟೆ ವಿದ್ಯುತ್ ಪೂರೈಕೆ. ಮುಂಚೆ ಇಲ್ಲಿ ದಿನಕ್ಕೆ 8 ರಿಂದ 10 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿತ್ತು. ಆದ್ರೆ, ಈಗ ಇಲ್ಲಿ ವಿದ್ಯುತ್ ವ್ಯತ್ಯಯ ಇಲ್ಲದಿರೋದು ಜನರಿಗೆ ಮತ್ತಷ್ಟು ಮೋದಿ ಮೋದಿ ಅನ್ನುವಂತೆ ಮಾಡಿದೆ.
ಮುಂಚೆ ಇಲ್ಲಿ ಗುಂಡಿಗಳಿಂದಲೇ ತುಂಬಿರುತ್ತಿದ್ದ ರಸ್ತೆಗಳು ಈಗ ನಯವಾಗಿ ಓಡುಡುವಂತಾಗಿವೆ. ವಿಮಾನ ನಿಲ್ದಾಣದಿಂದ ವಾರಣಾಸಿ ತಲುಪಲು ಸುಮಾರು 1 ಗಂಟೆ 45 ನಿಮಿಷ ಸಮಯ ತೆಗೆದುಕೊಳ್ಳುತ್ತಿತ್ತು. ಈಗ ಕೇವಲ 45 ನಿಮಿಷದಲ್ಲಿ ವಾರಣಾಸಿ ತಲುಪಬಹದು. ಇದಕ್ಕಾಗಿ ಫ್ಲೈ ಓವರ್ ನಿರ್ಮಾಣ ಮಾಡಲಾಗಿದೆ. ರಸ್ತೆ ಪಕ್ಕದಲ್ಲಿ ಓಡಾಡಬೇಕಾದರೂ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇತ್ತು. ಆದ್ರೆ ಈಗ ಪ್ರತಿ ಸರ್ಕಲ್ನಲ್ಲೊಂದು ಶೌಚಾಲಯಗಳನ್ನ ನಿರ್ಮಿಸಲಾಗಿದೆ. ಎಲ್ಲರಿಗೂ ಶೌಚಾಲಯ ಬಳಕೆಯ ಅರಿವು ಮೂಡಿದೆ. ಈ ಬೆಳವಣಿಗೆಯಿಂದ ಮೋದಿ ಜನರ ಮನಸ್ಸನ್ನು ಗೆದ್ದಿದ್ದಾರೆ. ಹೀಗೆ ಅನೇಕ ರೀತಿಯ ರಸ್ತೆ, ವಿದ್ಯುತ್, ಕುಡಿಯುವ ನೀರು, ಗಂಗಾ ನದಿ ಸ್ವಚ್ಛತೆಯಿಂದ ಮೋದಿಯವರನ್ನು ಇಲ್ಲಿನ ಜನರು ಇಷ್ಟ ಪಡುತ್ತಿದ್ದಾರೆ.